ರಾಮನಗರ: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಜೆಡಿಎಸ್ ಚಿಹ್ನೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ನೀಡಿದ್ದ ಆಫರ್ ತಿರಸ್ಕಾರ ಮಾಡಿದ್ದಾರೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೆಂಬುದು ಎಲ್ಲರ ಅಪೇಕ್ಷೆಯಾಗಿದೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯೋಗೇಶ್ವರ್ ಅವರು ಜೆಡಿಎಸ್ ಚಿಹ್ನೆ ಅಡಿಯಲ್ಲಿ ಎನ್ಡಿಎ ಅಭ್ಯರ್ಥಿಯಾಗಲು ಸಿದ್ಧವಿರುವುದಾಗಿ ಹೇಳಿಕೊಂಡಿದ್ದರು. ಆದರೀಗ ಜೆಡಿಎಸ್ ಚಿಹ್ನೆ ಅಡಿಯಲ್ಲಿ ಸ್ಪರ್ಧಿಸಲು ನನ್ನ ಬೆಂಬಲಿಗರು ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾರೆ. ಜೆಡಿಎಸ್ ವರಿಷ್ಠರು ನೀಡಿರುವ ಆಫರ್ ಅನ್ನು ಯೋಗೇಶ್ವರ್ ತಿರಸ್ಕಾರ ಮಾಡಿರುವ ಕಾರಣ ಬಿಜೆಪಿ - ಜೆಡಿಎಸ್ ಮುಖಂಡರು, ಕಾರ್ಯಕರ್ತರು, ರೈತ, ಕನ್ನಡಪರ, ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆಗೆ ಒತ್ತಡ ಹೆಚ್ಚಾಗಿದೆ. ನಮ್ಮೆಲ್ಲರ ಅಪೇಕ್ಷೆಯೂ ಅದೇ ಆಗಿದೆ ಎಂದರು.
PublicNext
21/10/2024 07:29 pm