ಚನ್ನಪಟ್ಟಣ: ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಕಾಂಗ್ರೆಸ್ ಸಂಪುಟ ನನ್ನ ವಿರುದ್ಧ ಚನ್ನಪಟ್ಟಣದಲ್ಲಿ ಚುನಾವಣೆ ಮಾಡುತ್ತಿದೆ. ಸಿ ಪಿ ಯೋಗೇಶ್ವರ್ ಅವರಿಗೆ ಯಾಕೆ ಟಿಕೆಟ್ ಕೊಟ್ಟರು ಅಂತ ಎಲ್ಲರಿಗೂ ಗೊತ್ತಿದೆ. ಯೋಗೇಶ್ವರ್ ಅವರು 6 ವರ್ಷಕ್ಕೊಮ್ಮೆ ಪಕ್ಷಾಂತರ ಮಾಡುತ್ತಾರೆ. ಬಿಜೆಪಿಯಲ್ಲಿ ಅವರಿಗೆ ಎಲ್ಲಾ ಗೌರವ ನೀಡಿ ಶಕ್ತಿ ತುಂಬಿಸಿದ್ದರು. ಅವರಿಗೆ ಜನ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕನ್ನಿದೊಡ್ಡಿ ಪ್ರಚಾರ ಸಭೆಯಲ್ಲಿ ಯೋಗೇಶ್ವರ್ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಸಂಸದರಾಗಿ ಡಿಕೆಶಿ ಸಹೋದರ ಇದ್ದರು. ಚನ್ನಪಟ್ಟಣ ಸಹಾ ಅವರ ವ್ಯಾಪ್ತಿಗೆ ಬರುತಿತ್ತು ಕ್ಷೇತ್ರದಲ್ಲಿ ಅವರು ಯಾವುದೇ ಅಭಿವೃದ್ಧಿ ಮಾಡಿಲ್ಲ.ಅಭಿವೃದ್ಧಿ ಬಗ್ಗೆ ಮಾತನಾಡಲು ಏನು ಇಲ್ಲ. ಹೀಗಾಗಿ ಅವರ ಟಾರ್ಗೆಟ್ ದೇವೇಗೌಡರು ಮತ್ತು ಕುಮಾರಸ್ವಾಮಿ ಈಗ ನಿಖಿಲ್ ಕುಮಾರಸ್ವಾಮಿ.
ಇಗ್ಗಲೂರು ಡ್ಯಾಮ್ಗೂ ದೇವೇಗೌಡರಿಗೂ ಏನು ಸಂಬಂಧ ಇಲ್ಲ ಅಂತಾರೆ. ಇಗ್ಗಲೂರು ಬ್ಯಾರೇಜ್ ಸ್ಥಳ ಪರಿಶೀಲನೆ ಪೋಟೋ ಬಿಡುಗಡೆಯಾಗಿದೆ. ಇಗ್ಗಲೂರು ಬ್ಯಾರೇಜ್ಗೂ ದೇವೇಗೌಡರಿಗೂ ಸಂಬಂಧ ಇಲ್ಲ ಅಂತ ಕಾಂಗ್ರೆಸ್ ನಾಯಕರು ಹೇಳಿದ್ದರು. ಇತಿಹಾಸವನ್ನು ಯಾರು ಮರೆಮಾಚುವುದಕ್ಕೆ ಆಗುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
ವಿರೋಧಿಗಳಿಂದ ವೈಯಕ್ತಿಕ ಟೀಕೆ ವಿಚಾರಕ್ಕೆ ಮಾತನಾಡಿದ ಅವರು, ಅವರಿಗೆ ಮಾತನಾಡಲು ಬೇರೆ ವಿಚಾರ ಇಲ್ಲ. ಇವತ್ತು ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದಾರೆ.ಈ ಹಿಂದೆ ಏಕೆ ಇದೆಲ್ಲಾ ಮಾಡಲಿಲ್ಲ.?ತೆರವಾದ ಮೇಲೆ ಚನ್ನಪಟ್ಟಣ ನೆನಪಾಯ್ತಾ? ಎಂದು ವಾಗ್ದಾಳಿ ನಡೆಸಿದರು.
ನಾನು ಯೋಗೇಶ್ವರ್ ಸತ್ತರೆ ಇಲ್ಲೇ ಮಣ್ಣಾಗುತ್ತೇವೆ ಡಿ.ಕೆ ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ನಿಖಿಲ್ ಯಾರು ಸಾಯುವುದು ಬೇಡ ಎಲ್ಲ ನೂರಾರು ವರ್ಷ ಚೆನ್ನಾಗಿರಲಿ. ಇಲ್ಲಿ ಹುಟ್ಟು ಸಾವಿನ ಮಾತಿನ ಅವಶ್ಯಕತೆ ಇಲ್ಲ.ನಾನು ಇಂತಹ ಮಾತುಗಳಿಂದ ಟ್ರಿಗರ್ ಆಗುವುದಿಲ್ಲ. ಹಿಂದೆನೂ ಆಗಿಲ್ಲ ಈಗಲೂ ಆಗುವುದಿಲ್ಲ ಎಂದು ತಿಳಿಸಿದರು.
ದಿನೇ ದಿನೇ ಆತ್ಮವಿಶ್ವಾಸ ಹೆಚ್ಚುತ್ತಿದೆ. ಕುಮಾರಣ್ಣ ಸ್ವ ಕ್ಷೇತ್ರ ಅನ್ನೋ ಕಾರಣಕ್ಕೆ ರಾಜ್ಯ ದೇಶದ ಗಮನ ಸೆಳೆದಿದೆ. ಜನ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ.ನನ್ನ ಮನದಾಳದ ಮಾತು ಜನರಿಗೆ ತಲುಪುತ್ತಿದೆ. ಎಂದು ಪ್ರಚಾರದ ವೇಳೆ ಕನ್ನಿದೊಡ್ಡಿ ಗ್ರಾಮದಲ್ಲಿ ತಿಳಿಸಿದರು.
PublicNext
09/11/2024 08:35 pm