ರಾಮನಗರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಧಿಸಿರುವ ನಿಷೇಧಾಜ್ಞೆ ಆದೇಶ ರದ್ದು ಸೇರಿದಂತೆ ವಿವಿಧ ಬೇಡಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘವು ಕನ್ನಡಪರ, ಪ್ರಗತಿಪರ, ದಲಿತಪರ ಸಂಘಟನೆಗಳ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜನವರಿ 6ರಂದು ಬೃಹತ್ ಪ್ರತಿಭಟನೆ ಹಾಗೂ ಸಮಾವೇಶ ಹಮ್ಮಿಕೊಂಡಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ.ಸಿ ಕಚೇರಿ ಪ್ರವೇಶದ್ವಾರದ ಎದುರು ನಡೆಯುವ ಪ್ರತಿಭಟನೆಯಲ್ಲಿ ಸಂಘದ ರಾಜ್ಯಮಟ್ಟದ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲಿನ 9 ಜಿಲ್ಲೆಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.
Kshetra Samachara
05/01/2025 04:07 pm