ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಕೇಂದ್ರ ಸಚಿವ ಗಡ್ಕರಿಗೆ ಡಿಕೆಶಿ ಸಹೋದರರು ಮನವಿ

ರಾಮನಗರ: ಕಳೆದ ಕೆಲವು ದಿನಗಳಿಂದ ರಾಮನಗರ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಸೇತುವೆಗಳು ಹೆದ್ದಾರಿಗಳು ಕೊಚ್ಚಿಕೊಂಡು ಹೋಗಿದ್ದು ಅವುಗಳ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಿ ಎಂದು ಡಿ.ಕೆ.ಸಹೋದರರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಬೆಂಗಳೂರಿನಲ್ಲಿ ಮನವಿ ಮಾಡಿದರು.

ಬೆಂಗಳೂರು ಮೈಸೂರು ದಶಪಥ ರಸ್ತೆಯ ರಾಮನಗರ, ಚನ್ನಪಟ್ಟಣ ಹೆದ್ದಾರಿ ಮಹಾ ಮಳೆಗೆ ಕೊಚ್ವಿ ಹೋಗಿದ್ದು ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು ಶೀಘ್ರವೇ ಹಣ ಮಂಜೂರು ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಿ ಹಾಗೂ ಕನಕಪುರ ತಾಲೂಕಿನ ಅರ್ಕಾವತಿ ಸೇತುವೆ ಕುಸಿದು ಬಿದ್ದಿದ್ದು ವಿಶೇಷ ಅನುದಾನದಡಿಯಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿ ಎಂದು ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅಧಿಕಾರಿಗಳಿಂದ ವರದಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಹಾಗೂ ಶೀಘ್ರವಾಗಿ ಕಾಮಗಾರಿ ನಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವರದಿ : ಎಲ್.ಜಿ.ಜಯರಾಮನಾಯಕ್, ಪಬ್ಲಿಕ್ ನೆಕ್ಸ್ಟ್ ಕನಕಪುರ

Edited By : Vijay Kumar
PublicNext

PublicNext

09/09/2022 11:02 pm

Cinque Terre

21.91 K

Cinque Terre

0