ಕನಕಪುರ: ಸರ್ಕಾರದ ಸೌಲಭ್ಯಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.
ತಾಲ್ಲೂಕಿನ ಮರಳವಾಡಿ ಹೋಬಳಿಯ ತೋಕಸಂದ್ರ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಆದೇಶ ಪತ್ರ ವಿತರಣೆ ಮಾಡಿ ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿ ಮಾಡುವುದೇ ನಮ್ಮ ಗುರಿಯಾಗಿದ್ದು ಅದಕ್ಕಾಗಿ ಕೋಟ್ಯಂತರ ರೂಪಾಯಿಗಳ ಅನುದಾನವನ್ನು ತರಲಾಗಿದೆ ಮರಳವಾಡಿ ಹೋಬಳಿ ಯಾದ್ಯಂತ ಹಲವಾರು ಅಭಿವೃದ್ಧಿ ಕೆಲಸಗಳು ಸಾಗುತ್ತಿವೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಾಮಕೃಷ್ಣ, ಗ್ರಾಪಂ ಅಧ್ಯಕ್ಷೆ ಸುನೇತ್ರಾಶಿವರುದ್ರ, ಸದಸ್ಯ ಶ್ರೀಕಂಠಯ್ಯ, ತಾಪಂ ಮಾಜಿ ಸದಸ್ಯರಾದ ಶಿಲ್ಪಾಶಿವಾನಂದ, ಕೆ.ಎನ್.ರಾಮು, ಹಾರೋಹಳ್ಳಿ ಜೆಡಿಎಸ್ ಅಧ್ಯಕ್ಷ ಮಲ್ಲಯ್ಯ, ಕೊಳ್ಳಿಗನಹಳ್ಳಿಪ್ರದೀಪ್ ಇತರರು ಇದ್ದರು.
PublicNext
27/09/2022 09:27 am