ಕನಕಪುರ : ಮುಂದಿನ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಮಿಷನ್ 123 ಹಾಗೂ ಪಂಚರತ್ನ ಕಾರ್ಯಕ್ರಮಗಳಿಗೆ ನವೆಂಬರ್ ಒಂದರಂದು ಚಾಲನೆ ನೀಡಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಹಾರೋಹಳ್ಳಿ ಹೋಬಳಿಯ ಕೊಳ್ಳಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನ ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಾದೇಶಕ ಪಕ್ಷದ ಮಹತ್ವವನ್ನು ಸಾರುವ ಮತ್ತು ನಮ್ಮ ಪಕ್ಷದ ಧ್ಯೇಯೋದ್ದೇಶಗಳನ್ನು ಹಾಗೂ ನಮ್ಮ ಕೊಡುಗೆಗಳನ್ನು ರಾಜ್ಯದ ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ರಾಮನಗರ ಜಿಲ್ಲೆ ಕಳೆದ ೨೦ ವರ್ಷಗಳ ಹಿಂದೆ ಅಭಿವೃದ್ಧಿ ವಂಚಿತವಾಗಿ ಹಿಂದುಳಿದ ಜಿಲ್ಲೆಯಾಗಿತ್ತು ನಂತರದ ದಿನಗಳಲ್ಲಿ ಶರವೇಗದಲ್ಲಿ ಅಭಿವೃದ್ಧಿ ಹೊಂದಿದ್ದು ಅದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರ ಕಾರಣ ಎಂದು ಸ್ಮರಿಸಿದರು.
ಶಾಸಕಿ ಅನಿತಾಕುಮಾರಸ್ವಾಮಿ 40 ಕೋಟಿಗೂ ಅಧಿಕ ಅನುದಾನವನ್ನು ಬಿಡುಗಡೆ ಮಾಡಿಸಿದ್ದು, ಕಾಮಗಾರಿಗಳು ನಡೆಯುತ್ತಿವೆ. ಅವುಗಳನ್ನು ಸರಿಪಡಿಸುವ ಕೆಲಸವಾಗಬೇಕಿದೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಮಾಡುವುದು ನಮ್ಮ ಗುರಿಯಾಗಿದೆ ಎಂದರು.
ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಾಮಕೃಷ್ಣ, ಗ್ರಾಪಂ ಅಧ್ಯಕ್ಷ ರವಿಕುಮಾರ್, ಮಾಜಿ ತಾಪಂ ಸದಸ್ಯ ಕೆ.ಎನ್.ರಾಮು, ಮುಖಂಡರಾದ ಗೊಲ್ಲಳ್ಳಿಸುರೇಶ್, ಪ್ರದೀಪ್, ಲಕ್ಷ್ಮಣ್, ಪ್ರದೀಪ್, ಕಾಳರಾಜು ಇತರರು ಇದ್ದರು.
ವರದಿ : ಎಲ್.ಜಿ.ಜಯರಾಮನಾಯಕ್ ಪಬ್ಲಿಕ್ ನೆಕ್ಸ್ಟ್ ಕನಕಪುರ
PublicNext
29/09/2022 11:05 pm