ಕನಕಪುರ : ರಾಮನಗರ ಕ್ಷೇತ್ರದಾದ್ಯಂತ ಅಭಿವೃದ್ಧಿ ಕೆಲಸಗಳು ಸಮರೋಪಾದಿಯಲ್ಲಿ ಸಾಗುತ್ತಿದ್ದು, ಅಭಿವೃದ್ದಿಗೆ ನಮ್ಮ ಮೊದಲ ಆದ್ಯತೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಚೀಲೂರು ಗ್ರಾಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಆದೇಶಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅನಿತಾ ಕುಮಾರಸ್ವಾಮಿ, ಸುಮಾರು 40 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಯು ಪ್ರಗತಿಯಲ್ಲಿದ್ದು ಜನರ ಆಶಯಗಳನ್ನು ಈಡೇರಿಸಲಾಗುತ್ತಿದೆ ಎಂದು ಹೇಳಿದರು.
ನಮ್ಮ ಪತಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹಾರೋಹಳ್ಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿದ್ದು ಅಕ್ಟೋಬರ್ ತಿಂಗಳ ಕೊನೆಯ ವಾರ ಅಥವಾ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಅಧಿಕೃತವಾಗಿ ಚಾಲನೆ ಸಿಗಲಿದೆ. ಜನರು ಕನಕಪುರಕ್ಕೆ ತಮ್ಮ ಕೆಲಸಕ್ಕೆ ಅಲೆಯುವುದು ತಪ್ಪಲಿದೆ ಎಂದು ಹೇಳಿದರು.
ಈ ವೇಳೆ ಗ್ರೇಡ್ ೨ ತಹಸೀಲ್ದಾರ್ ಶಿವಕುಮಾರ್, ಗ್ರಾಪಂ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷೆ ಸುಧಾನಾಗೇಶ್, ಸದಸ್ಯ ಬಿ.ಎಂ.ರಾಜು, ಹೊನ್ನಗಿರಿಗೌಡ, ಮುಖಂಡರಾದ ರಾಮಕೃಷ್ಣ, ಕೆ.ಎನ್.ರಾಮು, ಶೋಭಾ ಸಿದ್ದಪ್ಪ, ಕೊಳ್ಳಿಗನಹಳ್ಳಿ ಪ್ರದೀಪ್, ಹೆಚ್.ಪ್ರದೀಪ್, ಗ್ರಾಮ ಲೆಕ್ಕಿಗರಾದ ಮಂಜು, ಸಿದ್ದೇಗೌಡ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
ಎಲ್.ಜಿ.ಜಯರಾಮನಾಯಕ್, ಪಬ್ಲಿಕ್ ನೆಕ್ಸ್ಟ್, ಕನಕಪುರ
PublicNext
30/09/2022 09:08 pm