ಕನಕಪುರ: ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಜನರಿಗೆ ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಶಾಸಕಿ ಅನಿತಾಕುಮಾರಸ್ವಾಮಿ ತಿಳಿಸಿದರು.
ಕನಕಪುರ ತಾಲೂಕಿನ ಹಾರೋಹಳ್ಳಿ ಹೋಬಳಿಯ ಕೊಟ್ಟಗಾಳು ಗ್ರಾಮದಲ್ಲಿ ಕಂದಾಯ ಇಲಾಖೆಯ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.
ವಿಧವಾ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲ ವೇತನ ಸೇರಿದಂತೆ ಎಲ್ಲಾ ರೀತಿಯ ಸವಲತ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಹಲವಾರು ಅಭಿವೃದ್ಧಿ ಕೆಲಸಗಳು ಸಮರೋಪಾದಿಯಲ್ಲಿ ಸಾಗುತ್ತಿದ್ದು ಈ ತಿಂಗಳ ಅಂತ್ಯಕ್ಕೆ ಇನ್ನು ಕೋಟ್ಯಾಂತರ ರೂಗಳ ಕಾಮಗಾರಿ ಪ್ರಾರಂಭವಾಗಲಿದ್ದು ಚರಂಡಿ ಕಾಮಗಾರಿ, ಸಮುದಾಯ ಭವನ, ಕಾಂಕ್ರೀಟ್ ರಸ್ತೆ ಸೇರಿದಂತೆ ಹಲವಾರು ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.
ವಿಎಸ್‌ಎಸ್‌ಎನ್ ನಿರ್ದೇಶಕ ದೇವುರಾವ್ ಜಾಧವ್, ಮಾರೇಗೌಡಮಾಣಿ, ನಾಗರಾಜು, ತಾಪಂ ಮಾಜಿ ಸದಸ್ಯ ಕೆ.ಎನ್.ರಾಮು, ಗ್ರಾಪಂ ಅಧ್ಯಕ್ಷ ರವಿಕುಮಾರ್ ಸದಸ್ಯ ಬಿ.ಎಂ.ರಾಜು, ಮಾಜಿ ಅಧ್ಯಕ್ಷ ಸುರೇಶ್ ಗ್ರೇಡ್-೨ ತಹಸೀಲ್ದಾರ್ ಶಿವಕುಮಾರ್ ಡಿಟಿ ಮನೋಹರ್, ಗ್ರಾಮ ಲೆಕ್ಕಿಗರಾದ ಮಂಜುನಾಥ್, ಶಿವಲಿಂಗಯ್ಯ, ಮುಖಂಡರಾದ ಕೊಳ್ಳಿಗನಹಳ್ಳಿಪ್ರದೀಪ್, ಹೆಚ್.ಪ್ರದೀಪ್, ಚಂದ್ರು, ಕಾಳರಾಜು ಇತರರು ಇದ್ದರು.
PublicNext
11/10/2022 09:05 pm