ತಲಕಾವೇರಿ: ಕಾವೇರಿ ಇಂದು ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾಳೆ. ಇಂದು 7 ಗಂಟೆ 5 ನಿಮಿಷಕ್ಕೆ ಕನ್ಯಾ ಲಗ್ನದಲ್ಲಿ ಬ್ರಹ್ಮ ಕುಂಡಿಕೆಯಿಂದ ತೀರ್ಥ ಉಕ್ಕಿ ಬಂದಿದೆ.
ಕೊರೊನಾ ಹಿನ್ನೆಲೆಯಲ್ಲಿ ತೀರ್ಥೋಧ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರವೇ ಭಾಗವಹಿಸಲು ಅವಕಾಶ ನೀಡಲಾಗಿದೆ.
ವರ್ಷಕ್ಕೊಮ್ಮೆ ನಡೆಯುವ ಈ ತೀರ್ಥೋದ್ಭವಕ್ಕೆ ತಲಕಾವೇರಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಭಕ್ತರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ವರದಿ ಬಂದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿತ್ತು. ಈ ಬಾರಿ ಕೊಳದಲ್ಲಿ ಸ್ನಾನ ಮಾಡಲು ಅವಕಾಶ ನೀಡಲಾಗಿಲ್ಲ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೆ ತೀರ್ಥ ಪಡೆದುಕೊಳ್ಳಲು ನೂಕುನುಗ್ಗಲು ಆಗದಂತೆ ಕೊಳದ ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿದೆ.
ಪಿಂಡ ಪ್ರಧಾನ ಕಾರ್ಯಕ್ಕೆ ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ರವರೆಗೆ ಅವಕಾಶವಿದೆ. ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಕ್ತರು ಸಂಗಮಕ್ಕೆ ಇಳಿಯಬಾರದು ಎಂದು ದೇವಾಲಯ ಸಮಿತಿ ಮನವಿ ಮಾಡಿದೆ.
PublicNext
17/10/2020 11:51 am