ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿಯು, ವಕ್ಫ್ ಕಾಯ್ದೆಗೆ ವಿರುದ್ಧವಾಗಿದೆ ಮತ್ತು ಶರೀಯತ್ ಕಾನೂನಿಗೆ ವಿರುದ್ಧವಾಗಿದೆ’ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಸದಸ್ಯ ಜಫರ್‌ಯಾಬ್ ಜಿಲಾನಿ ಹೇಳಿದ್ದಾರೆ.
‘ವಕ್ಫ್ ಕಾಯ್ದೆಯ ಪ್ರಕಾರ ಮಸೀದಿ ಅಥವಾ ಮಸೀದಿಯ ಜಾಗವನ್ನು ವಿನಿಮಯ ಮಾಡಿಕೊಳ್ಳಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿಯು ಈ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ. ವಕ್ಫ್ ಕಾಯ್ದೆಯು ಶರೀಯತ್ ಹಿನ್ನಲೆಯ ಆಧಾರಿತವಾಗಿದೆ. ಹೀಗಾಗಿ ಇಲ್ಲಿ ಅದ ಉಲ್ಲಂಘನೆಯೂ ಆಗುತ್ತಿದೆ’ ಎಂದು ಬಾಬರಿ ಮಸೀದಿ ಕ್ರಿಯಾ ಸಮಿತಿ ಸಂಚಾಲಕರೂ ಆಗಿರುವ ಜಫರ್‌ಯಾಬ್ ಜಿಲಾನಿ ಅವರು ತಿಳಿಸಿದ್ದಾರೆ.
ಆದರೆ ಇದರ ಬೆನ್ನಲ್ಲೇ ಅಯೋಧ್ಯೆ ಮಸೀದಿ ನಿರ್ಮಾಣ ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಅಥರ್ ಹುಸೈನ್ ಇ್ಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ‘ಪ್ರತಿಯೊಬ್ಬರೂ ಶರೀಯತ್ ಅನ್ನು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸುತ್ತಾರೆ ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಭೂಮಿ ಮಂಜೂರಾತಿ ಆಗಿದೆ ಹೀಗಾಗಿ ಇದು ಕಾನೂನುಬಾಹಿರವಾಗದು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
PublicNext
24/12/2020 07:51 am