ಮಂಡ್ಯ: ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಶ್ರೀರಂಗನಾಥ ದೇವಾಲಯದ ಲಕ್ಷ ದೀಪೋತ್ಸವವನ್ನು ರದ್ದುಗೊಳಿಸಲಾಗಿದೆ. ಕಳೆದ 24 ವರ್ಷಗಳಿಂದ ಶ್ರೀರಂಗಪಟ್ಟಣದಲ್ಲಿರುವ ಶ್ರೀರಂಗನಾಥ ದೇವಾಲಯದಲ್ಲಿ ನಡೆಯುತ್ತಿದ್ದ ಲಕ್ಷ ದೀಪೋತ್ಸವವನ್ನು ರದ್ದು ಮಾಡಲಾಗಿದೆ.
ಮಕರ ಸಂಕ್ರಾಂತಿಯಂದು ರಾತ್ರಿ ಭಾರೀ ವಿಜೃಂಭಣೆಯಿಂದ ಲಕ್ಷ ದೀಪೋತ್ಸವ ನಡೆಯುತ್ತಿತ್ತು. ಇದೇ ಮೊದಲ ಬಾರಿಗೆ ರದ್ದಾಗಿದೆ ಎನ್ನಲಾಗುತ್ತಿದೆ. ಇನ್ನೂ, ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶ್ರೀರಂಗನಾಥ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.
PublicNext
15/01/2022 08:53 pm