ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 26ರಂದು ಮಸೀದಿ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಡಿಸೆಂಬರ್ 19ರಂದು ಇಂಡೋ-ಇಸ್ಲಾಮಿಕ್ ಕಲ್ಚರ್ ಫೌಂಡೇಶನ್ ಮಸೀದಿ ಮತ್ತು ಆಸ್ಪತ್ರೆಯ ನೀಲ ನಕ್ಷೆಯನ್ನು ಬಿಡುಗಡೆ ಮಾಡಿತ್ತು. ಅಲಿಘಡ ಮುಸ್ಲಿಂ ಯೂನಿವರ್ಸಿಟಿಯ ವಾಸ್ತು ವಿಭಾಗದ ಡೀನ್ ಎಂ ಎಸ್ ಅಖ್ತರ್ ಅವರು ಮಸೀದಿಯನ್ನು ವಿನ್ಯಾಸಗೊಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಉತ್ತರ ಪ್ರದೇಶ ಸರ್ಕಾರ ಮಸೀದಿ ನಿರ್ಮಾಣಕ್ಕೆ ಧನ್ನಿಪುರದಲ್ಲಿ 5 ಎಕರೆ ಜಮೀನು ನೀಡಿದೆ. ಇದೇ ಸ್ಥಳದಲ್ಲಿ ಮಸೀದಿ ಹಾಗೂ ಆಸ್ಪತ್ರೆ ನಿರ್ಮಾಣವಾಗಲಿದೆ.
PublicNext
28/12/2020 04:01 pm