ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಯೋಧ್ಯೆ ರಾಮ ಮಂದಿರಕ್ಕಾಗಿ ಮೂರೇ ದಿನದಲ್ಲಿ 100 ಕೋಟಿ ರೂ. ದೇಣಿಗೆ ಸಂಗ್ರಹ!

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಮೂರೇ ದಿನಗಳಲ್ಲಿ 100 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

ದೇಗುಲ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ ಕಾರ್ಯಕ್ಕೆ ಮೂರು ದಿನಗಳ ಹಿಂದೆ ಚಾಲನೆ ನೀಡಲಾಗಿತ್ತು. ಇತ್ತೀಚಿನ ಮಾಹಿತಿಯ ಪ್ರಕಾರ ಮೂರು ದಿನಗಳಲ್ಲಿ ದೇಶಾದ್ಯಂತ 100 ಕೋಟಿ ರೂಪಾಯಿಗಳ ದೇಣಿಗೆ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ದೇಶದ ಅನೇಕ ರಾಜಕಾರಣಿಗಳು, ಉದ್ಯಮಿಗಳು, ಸಾರ್ವಜನಿಕರು ದೇಣಿಗೆ ನೀಡಿದ್ದಾರೆ.

Edited By : Vijay Kumar
PublicNext

PublicNext

18/01/2021 03:29 pm

Cinque Terre

42.27 K

Cinque Terre

1