ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವಸ್ಥಾನಗಳ ಮೇಲೆ ದಾಳಿ: ಕೇಂದ್ರ ಗೃಹ ಸಚಿವರಿಗೆ ಪೇಜಾವರ ಶ್ರೀ ಪತ್ರ

ಉಡುಪಿ: ಆಂಧ್ರಪ್ರದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂತರ ಮೂರ್ತಿಯನ್ನ ವಿರೂಪಗೊಳಿಸಿರುವುದು ಹಾಗೂ ಆಂಧ್ರ ಪ್ರದೇಶದಲ್ಲಿ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನ ಖಂಡಿಸಿ ಪೇಜಾವರ ಮಠದ ಶ್ರೀಗಳು ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಾಮತೀರ್ಥಂನ ಬೋಡಿಕೊಂಡ ಬೆಟ್ಟದ ಮೇಲಿರುವ ಪ್ರಾಚೀನ ಸೀತಾ ಲಕ್ಷ್ಮಣ ಕೋದಂಡರಾಮ ದೇವಸ್ಥಾನದಲ್ಲಿ ಇತ್ತೀಚೆಗೆ ಭಗವಾನ್ ರಾಮ್ ವಿಗ್ರಹ ಧ್ವಂಸ ಪ್ರಕರಣ ಇಡೀ ಹಿಂದೂ ಸಮುದಾಯವನ್ನು ಕೆರಳಿಸಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.

ಕಳೆದ ಒಂದೂವರೆ ವರ್ಷಗಳಲ್ಲಿ, ದೇವಾಲಯಗಳ ಮೇಲೆ 120 ದಾಳಿಗಳು ನಡೆದಿವೆ. ಈ ದಾಳಿಗಳು ಪೂರ್ವನಿರ್ಧರಿತ ಯೋಜನೆಯಂತೆ ಕಂಡು ಬರುತ್ತಿವೆ. ಸರ್ಕಾರದ ನಿಷ್ಕ್ರಿಯತೆಯಿಂದಾಗಿ ದುಷ್ಕೃತ್ಯಗಳನ್ನು ಎಸಗುತ್ತಿರುವುದು ಸ್ಪಷ್ಟವಾಗಿದೆ. ದೇವಾಲಯಗಳ ಮೇಲಿನ ವಿಧ್ವಂಸಕ ಕೃತ್ಯಗಳ ಹಿಂದಿರುವ ಜನರನ್ನು ಪತ್ತೆಹಚ್ಚಿ ಬಂಧಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ದೇವಾಲಯಗಳನ್ನು ರಕ್ಷಿಸಲು ಹಿಂದೂ ಸಮುದಾಯ ಮಾಡುತ್ತಿರುವ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

18/01/2021 04:46 pm

Cinque Terre

50.44 K

Cinque Terre

2