ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 20 ದಿನಗಳಲ್ಲಿ 600 ಕೋಟಿ ರೂಪಾಯಿಗೂ ಅಧಿಕ ದೇಣಿಗೆ ಸಂಗ್ರಹವಾಗಿದೆ ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳು ತಿಳಿಸಿದ್ದಾರೆ.
ಟ್ರಸ್ಟ್ ಜನವರಿ 15ರಂದು ಅಯೋಧ್ಯೆಯಲ್ಲಿ ದೇವಾಲಯ ನಿರ್ಮಾಣಕ್ಕಾಗಿ ಸಾಮೂಹಿಕ ದೇಣಿಗೆ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿತು. ನಿಧಿ ಅಭಿಯಾನ ಫೆಬ್ರವರಿ 27 ರವರೆಗೆ ನಡೆಯಲಿದೆ.
PublicNext
09/02/2021 04:51 pm