ಮೈಸೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳ ಪಡುವ ಎಲ್ಲ ದೇವಸ್ಥಾನಗಳಿಗೆ ಸರ್ಕಾರವೇ ಅರ್ಚಕರನ್ನು ನೇಮಕ ಮಾಡುತ್ತಿದೆ. ಎಲ್ಲ ಅರ್ಚಕ ಹುದ್ದೆಗಳಿಗೆ ಬ್ರಾಹ್ಮಣ ಸಮುದಾಯದವರನ್ನೇ ನೇಮಕ ಮಾಡಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮೈಸೂರಿನ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ವಿಪ್ರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತು ಕೊಳ್ಳುವ ಪ್ರಯತ್ನ ಸರ್ಕಾರದಿಂದ ನಡೆಯುತ್ತಿದೆ ಎಂದು ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
PublicNext
01/03/2021 08:23 pm