ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ಮುಂದೆ ಪರಿಸರ ಸ್ನೇಹಿ ಚೀಲದಲ್ಲಿ ತಿರುಪತಿ ಲಾಡು

ಹೈದರಾಬಾದ್: ಇನ್ಮುಂದೆ ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿತರಿಸಲಾಗುವ ಲಾಡುಗಳನ್ನು ಪರಿಸರ ಸ್ನೇಹಿ ಚೀಲದಲ್ಲಿ ಹಾಕಿ ಕೊಡಲಾಗುತ್ತೆ. ಈ ಪರಿಸರ ಸ್ನೇಹಿ ಚೀಲಗಳನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ತಯಾರಿಸಿದೆ.

ಹೊಸ ಬ್ಯಾಗ್‍ಗಳಲ್ಲಿ ಲಡ್ಡು ವಿತರಿಸುವ ಕೌಂಟರ್‌ಅನ್ನು ನಿನ್ನೆ ಡಿಆರ್‌ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎಸ್ ಜವಾಹರ್ ರೆಡ್ಡಿ ಉದ್ಘಾಟಿಸಿದ್ದಾರೆ. ಡಿಆರ್‌ಡಿಒ ತಯಾರಿಸಿರುವ ಈ ಚೀಲಗಳು, ಆರೋಗ್ಯಕ್ಕೆ ಹಾನಿಕರವಲ್ಲ. ಮಣ್ಣಿನಲ್ಲಿ ಬೇಗನೇ ಕೊಳೆಯುತ್ತವೆ. ಅಲ್ಲದೆ ಇವುಗಳ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

24/08/2021 12:21 pm

Cinque Terre

15.96 K

Cinque Terre

0