ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು; ಪೇಜಾವರ ಶ್ರೀ

ಉಡುಪಿ: ಪೇಜಾವರ ಮಠದ ಹಿರಿಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ದಲಿತ ಮನೆಗೆ ಭೇಟಿ ನೀಡಿದ್ದನ್ನು ಟೀಕಿಸಿದ್ದ ಸಂಗೀತ ನಿರ್ದೇಶಕ, ನಾದಬ್ರಹ್ಮ ಡಾ. ಹಂಸಲೇಖ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, "ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದು ನನ್ನ ಗುರುಗಳಿಗೆ. ಹಾಗಾಗಿ ಹಂಸಲೇಖ ಅವರು ನನ್ನ ಗುರುಗಳನ್ನೇ ಟೀಕಿಸಿರಬೇಕು. ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ" ಎಂದು ನುಡಿದರು.

ಸಾಕಷ್ಟು ಮಂದಿ ಪ್ರಚಾರಕ್ಕಾಗಿ ಹೀಗೆ ಮಾಡುತ್ತಾರೆ. ಆದರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ. ನನ್ನ ಗುರುಗಳು ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು. ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆ ಹಾವಳಿ, ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು. ಸಮಾಜದ ಎಲ್ಲರವನ್ನು ಅವರು ಬಯಸುತ್ತಿದ್ದರು. ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ ಎಂದಿದ್ದಾರೆ.

ಭಗವಾನ್ ಶ್ರೀಕೃಷ್ಣನಿಗೆ ಅಗ್ರಪೂಜೆ ಮಾಡುವಾಗ ಶಿಶುಪಾಲ ವಿರೋಧಿಸಿದ್ದ. ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ. ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ನಾವು ದಲಿತರ ಜೊತೆಗಿದ್ದೇವೆ, ದಲಿತರು ನಮ್ಮಿಂದ ಹೊರತಲ್ಲ. ಐಕ್ಯ ಸಂದೇಶ ನೀಡುವ ಸಲುವಾಗಿ ನಮ್ಮ ಕಾರ್ಯಕ್ರಮಗಳು ನಡೆಯುತ್ತವೆ. ನಮ್ಮ ಗುರುಗಳ ಮೇಲೆ ಅಭಿಮಾನದಿಂದ ಯಾರಾದರೂ ಧರಣಿ ಮಾಡಿದರೆ, ಅದು ಪ್ರತಿಭಟನೆ ಮಾಡುವವರ ವೈಯಕ್ತಿಕ ವಿಚಾರವಾಗಿರುತ್ತೆ. ನಾವಂತೂ ಯಾವುದೇ ರೀತಿಯ ಪ್ರತಿಭಟನೆ ಮಾಡುವುದಿಲ್ಲ, ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದು ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿದ್ದಾರೆ.

ಇನ್ನು ತಾವಾಡಿದ ಮಾತು ವಿವಾದವಾಗುತ್ತಿದ್ದಂತೆ ಸಂಗೀತ ನಿರ್ದೇಶಕ ಹಂಸಲೇಖ ಫೇಸ್ ಬುಕ್ ನಲ್ಲಿ ವಿಡಿಯೊ ಮೂಲಕ ಜನತೆಯ ಕ್ಷಮೆಯಾಚಿಸಿದ್ದಾರೆ. ಅಸ್ಪೃಶತೆಯನ್ನ ತೊಡಗಿಸಲು ಶ್ರೀಗಳು ಶ್ರಮ ವಹಿಸುತ್ತಿದ್ದಾರೆ. ಅದರ ಬಗ್ಗೆ ನನಗೆ ಗೌರವವಿದೆ. ನುಡಿದರೆ ಮುತ್ತಿನಂತಿರಬೇಕು, ಆದ್ರೆ ನಾನು ತಪ್ಪು ಮಾಡಿದೆ. ನಾನು ಆಡಿದ ಮಾತುಗಳು ನನ್ನ ಪತ್ನಿಗೇ ಹಿಡಿಸಲಿಲ್ಲ. ನಾನು ಸಂಗೀತಗಾರ – ಕಂಟ್ರೋಲ್‌ನಲ್ಲಿ ಇರಬೇಕು. ಯಾರ ಮನಸ್ಸು ನೋಯಿಸಲು ನನಗೆ ಇಷ್ಟವಿಲ್ಲ. ಹೀಗಾಗಿ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಕೇಳಿದ್ದಾರೆ.

Edited By : Shivu K
PublicNext

PublicNext

15/11/2021 10:59 am

Cinque Terre

75.76 K

Cinque Terre

18