ಬೆಂಗಳೂರು: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಹಾಲಕೇರಿ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ.ಸಂಗನಬಸವ (ಅಭಿನವ ಅನ್ನದಾನೇಶ್ವರ) ಸ್ವಾಮೀಜಿಗಳು (85) ಇಂದು ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಶ್ರೀಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಶ್ರೀಗಳ ಅಂತಿಮ ದರ್ಶನ ಪಡೆದರು. ಶಿವಯೋಗ ಮಂದಿರ ಅಧ್ಯಕ್ಷರು ಆಗಿದ್ದ ಅಭಿನವ ಅನ್ನದಾನೇಶ್ವರ ಶ್ರೀಗಳು ನವೆಂಬರ್ 8, 9, 10ರಂದು ಮಠಕ್ಕೆ ನೂತನ ಚಿರ ಪಟ್ಟಾಧಿಕಾರ ಕಾರ್ಯಕ್ರಮ ನಡೆಸಿದ್ದರು. ತಮ್ಮ ಸ್ಥಾನಕ್ಕೆ ನೂತನವಾಗಿ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರನ್ನು ನೇಮಿಸಿದ್ದರು.
PublicNext
22/11/2021 10:26 am