ಗದಗ: ಅನಾರೋಗ್ಯದಿಂದಾಗಿ ನಿನ್ನೆ ಲಿಂಗೈಕ್ಯರಾದ ಗಜೇಂದ್ರಗಡ ತಾಲೂಕಿನ ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನಮಠದ ಡಾ.ಸಂಗನಬಸವ ಸ್ವಾಮೀಜಿಯವರ (85) ಅಂತ್ಯಕ್ರಿಯೆ ಇಂದು ಸಂಜೆ ನೆರವೇರಲಿದೆ.
ನಿನ್ನೆ ತಡರಾತ್ರಿ ಸ್ವಾಮೀಜಿಗಳ ಪಾರ್ಥೀವ ಶರೀರ ಹಾಲಕೆರೆ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಭಕ್ತರ ಆಕ್ರಂದನ ಮುಗಿಲು ಮುಟ್ಟಿತ್ತು. ಮಹಿಳೆಯರು, ಮಕ್ಕಳು ಎನ್ನದೇ ಎಲ್ಲರೂ ಶ್ರೀಗಳನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ಭಕ್ತರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಹಾಲಕೆರೆ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಮುದಾಯದ ವಿಧಿ ವಿಧಾನದಂತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಗೆ ಇಂದು ಸಂಜೆ ಅಂತ್ಯಕ್ರಿಯೆ ಜರುಗಲಿದೆ.
PublicNext
23/11/2021 11:46 am