ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ಮನಃಪೂರ್ವಕ ಮತಾಂತರ ಓಕೆ; ಒತ್ತಡ,ಆಮಿಷ ಸಲ್ಲದು"; ಪೇಜಾವರ ಶ್ರೀ

ಉಡುಪಿ: ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು,ಮಂಗಳೂರಿನಲ್ಲಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವುದು ನಿಜಕ್ಕೂ ದುರಂತ. ಮತಾಂತರದ ಹಾವಳಿ ಇಡೀ ಮನೆಯನ್ನೇ ಬಲಿ ತೆಗೆದುಕೊಂಡಿದೆ ಎಂದು ವಿಷಾದಿಸಿದರು.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶ್ರೀಗಳು, ಮತಾಂತರವನ್ನು ಕಾನೂನಿನ ಮೂಲಕ ಸರಕಾರ ನಿಗ್ರಹಿಸಬೇಕು. ಮನಃಪೂರ್ವಕವಾಗಿ ಯಾರಾದರೂ ಮತಾಂತರವಾದರೆ ನಮ್ಮ ಆಕ್ಷೇಪವಿಲ್ಲ. ಆದರೆ ಒತ್ತಡ, ಆಮಿಷ, ಬಲವಂತದಿಂದ ಮತಾಂತರ ಮಾಡಿದರೆ ಅದನ್ನು ಸಹಿಸಲಾಗುವುದಿಲ್ಲ. ಇದು ಸಮಾಜ ಒಡೆಯುವ ಕೃತ್ಯ.ಇದರಿಂದ ಸಮಾಜದಲ್ಲಿ ವೈಷಮ್ಯ ಸೃಷ್ಟಿಯಾಗುತ್ತದೆ ಎಂದು

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ತಿಳಿಸಿದ್ದಾರೆ.

Edited By : Manjunath H D
PublicNext

PublicNext

09/12/2021 04:43 pm

Cinque Terre

56.43 K

Cinque Terre

13