ಬೆಳಗಾವಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸರ್ಕಾರ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ
ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡದಂತೆ ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹಾಕಲು ಧರಣಿ ಮಾಡಲು ಭಾರತೀಯ ಕ್ರೈಸ್ತ ಒಕ್ಕೂಟ ನಿರ್ಧರಿಸಿದೆ.
ಬೆಳಗಾವಿಯಲ್ಲಿ ಡಿ.17ರಂದು ಭಾರತೀಯ ಕ್ರೈಸ್ತ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಕಾಯ್ದೆ ಜಾರಿ ತರಬಾರದು ಮತ್ತು ಚರ್ಚ್ ಮೇಲೆ ದಾಳಿ ಪ್ರಕರಣ ತಡೆ ಕ್ರಮಕ್ಕೆ ಆಗ್ರಹಿಸಿ ಆ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲು ಕ್ರೈಸ್ತ ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ.
ಈಗಾಗಲೇ ನಗರ ಪೊಲೀಸ್ ಆಯುಕ್ತರ ಬಳಿ ಧರಣಿಗೆ ಅನುಮತಿ ಪಡೆದುಕೊಂಡಿರುವ ಭಾರತೀಯ ಕ್ರೈಸ್ತ ಒಕ್ಕೂಟ,
ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ. ಬೆಳಗಾವಿಯಲ್ಲಿ ಒಂದು ದಿನದ ಸಾಂಕೇತಿಕ ಹೋರಾಟ ಮಾತ್ರ ಇದಾಗಿದೆ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟದ ಕಾನೂನು ಸಲಹೆಗಾರ ಎಮ್. ರಮೇಶ್ ಹೇಳಿಕೆ ನೀಡಿದ್ದಾರೆ.
PublicNext
12/12/2021 03:02 pm