ಶಿರಸಿ: ದಕ್ಷಿಣ ಭಾರತದ ಜಾಗೃತ ಶಕ್ತಿಪೀಠಗಳಲ್ಲಿ ಒಂದಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆ ಮಾರ್ಚ್ 15 ರಿಂದ 23ರವರೆಗೆ ನಡೆಯಲಿದೆ. ದೇವಾಲಯದಲ್ಲಿ ಇಂದು ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ರಾಮಕೃಷ್ಣ ಭಟ್ಟ ಕೆರೆಕೈ ಜಾತ್ರೆಯ ದಿನಾಂಕ ಘೋಷಿಸಿದರು.
ಪ್ಲವನಾಮ ಸಂವತ್ಸರದ ಫಾಲ್ಗುಣ ಶುಕ್ಲ ದ್ವಾದಶಿಯಂದು ಜಾತ್ರೆ ಆರಂಭವಾಗಲಿದೆ. ಜಾತ್ರೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಅಜಯ ನಾಡಿಗ ಮುಹೂರ್ತ ದೀಪ ಬೆಳಗಿದರು. ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಲಾಯಿತು. ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದ ಪೂರ್ವ ವಿಧಿ-ವಿಧಾನಗಳು ಜ.26 ರಿಂದ ಪ್ರಾರಂಭವಾಗಲಿವೆ.
PublicNext
07/01/2022 08:47 pm