ದಾವಣಗೆರೆ: ವಾಲ್ಮೀಕಿ ಸಮುದಾಯಕ್ಕೆ ಶೇಕಡಾ 7.5 ರಷ್ಟು ಮೀಸಲಾತಿ ನೀಡದಿದ್ದರೆ ರಾಜ್ಯ ಸರ್ಕಾರ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಬಂದ ಮೇಲೆ ಮೀಸಲಾತಿ ಜಾರಿ ಮಾಡ್ತೀವಿ ಅಂತ ಯಡಿಯೂರಪ್ಪ ಅವರು ಹೇಳಿದ್ದರು. ಆದರೆ ಅವರು ವಾಲ್ಮೀಕಿ ಸಮುದಾಯದ ಜನರ ಕಿವಿ ಮೇಲೆ ಹೂ ಇಡುವಂತ ಕೆಲಸ ಮಾಡಿ ಮನೇಲಿ ಕುಳಿತಿದ್ದಾರೆ. ನಾಲ್ಕನೇ ಐತಿಹಾಸಿಕ ಜಾತ್ರೆಯಲ್ಲಿ ಒಂದು ನಿರ್ಧಾರ ತೆಗೆದುಕೊಳ್ಳುತ್ತೇವೆ. ಫೆಬ್ರವರಿ 8 ಮತ್ತು 9 ರಂದು ವಾಲ್ಮೀಕಿ ಮಠದಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಸಮಾವೇಶದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಖಚಿತ. ಇದರಲ್ಲಿ ಅನುಮಾನ ಬೇಡ. ಯಾವ ರೀತಿಯಲ್ಲಿ ಹೋರಾಟಮುಂದುವರಿಸಬೇಕು ಎಂಬ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಈ ಹಿಂದಿನ ಹೋರಾಟಕ್ಕಿಂತ ಈಗ ಮಾಡುವ ಹೋರಾಟ ಬೇರೆಯದ್ದೇ ಸ್ವರೂಪದಲ್ಲಿ ಇರಲಿದೆ ಎಂದು ಶ್ರೀಗಳು ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರಕ್ಕೆ ನಮ್ಮ ಕೊನೆಯ ಗಡುವು ನೀಡುತ್ತಿದ್ದೇವೆ. ಫೆ. 9 ರೊಳಗೆ ವಾಲ್ಮೀಕಿ ಜಾತ್ರೆಯಲ್ಲಿ ನಾಯಕ ಜನಾಂಗಕ್ಕೆ 7.5 ಮೀಸಲಾತಿ ಘೋಷಣೆಮಾಡಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ. ಘೋಷಣೆ ಮಾಡದಿದ್ದರೆ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಿರುವುದಾಗಿ ಸ್ವಾಮೀಜಿ ತಿಳಿಸಿದರು.
PublicNext
09/01/2022 05:46 pm