ಬೆಂಗಳೂರು: ಸಂಕ್ರಾಂತಿ ದಿನವಾದ ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯನ ರಶ್ಮಿ ಗವಿ ಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸಿದೆ.ಈ ಬಾರಿ ಒಟ್ಟು 2 ನಿಮಿಷ 13 ಸೆಕಂಡ್ ಸೂರ್ಯ ರಶ್ಮಿ ಸ್ಪರ್ಶವಾಗಿರುವುದು ಒಳಿತಿನ ಸೂಚಕ ಎಂದು ಅರ್ಚಕರು ಹೇಳಿದ್ದಾರೆ. ಇಂದು ಸಂಜೆ 5:17ರ ಸಮಯದಲ್ಲಿ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯನ ರಶ್ಮಿ ಗವಿ ಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸಿದೆ.
ಉತ್ತರಾಯಣ ಆರಂಭಗೊಳ್ಳುವ ಶುಭ ಘಳಿಗೆಯಲ್ಲಿ ಭಾಸ್ಕರ ತನ್ನ ಪಥ ಬದಲಿಸಿದ ಹಿನ್ನೆಲೆಯಲ್ಲಿ ಸೂರ್ಯ ರಶ್ಮಿ ಗವಿ ಗಂಗಾಧರೇಶ್ವರನನ್ನು ಸ್ಪರ್ಶಿಸಿತು. ಈ ಐತಿಹಾಸಿಕ ನೆರಳು-ಬೆಳಕಿನಾಟಕ್ಕೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರ ದೇವಾಲಯ ಸಾಕ್ಷಿಯಾಯಿತು. ಸೂರ್ಯನ ಕಿರಣ ಶಿವಲಿಂಗವನ್ನು ಸ್ಪರ್ಶಿಸುತ್ತಿದ್ದಂತೆ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೋವಿಡ್ ಕಾರಣ ಈ ಬಾರಿ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಹೀಗಾಗಿ ಭಕ್ತರು ಮನೆಯಲ್ಲೇ ಇದ್ದು ಟಿವಿ ಮೂಲಕ ಕೌತುಕವನ್ನು ಕಣ್ತುಂಬಿಕೊಂಡಿದ್ದಾರೆ.
PublicNext
14/01/2022 06:05 pm