ಕುಣಿಗಲ್ : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಜಾತ್ರೆ ನಾಳೆ ಶುಕ್ರವಾರ ನಡೆಯಲಿದ್ದು,ಈಗಾಗಲೇ ಜಾತ್ರೆಯ ಕಾರ್ಯಕ್ರಮಗಳು ಬಹಳ ವಿಜ್ರಂಭಣೆಯಿಂದ ಜರುಗುತ್ತಿವೆ.
ಕೊರೊನಾ ಮಹಾಮಾರಿಯಿಂದ ಕಳೆದ ಎರಡು ವರ್ಷಗಳಿಂದ ಸರಳವಾಗಿ ಜಾತ್ರೆಯನ್ನು ಮಾಡಲಾಗಿತ್ತು. ಆದರೆ ಈ ಬಾರಿ ಕೊರೊನಾ ಕರಿನೆರಳು ಕಮರಿದ ಕಾರಣ ವಿಜೃಂಭಣೆಯಿಂದ ಜಾತ್ರಾ ಕಾರ್ಯಕ್ರಮಗಳು ನಡೆಯುತ್ತಿವೆ.
ನಾಳೆ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಅಭಿಜಿತ್ ಮುಹೂರ್ತದಲ್ಲಿ ಮಹಾ ರಥೋತ್ಸವ ಜರುಗಲಿದೆ. ಮುತ್ತಿನ ಪಲ್ಲಕ್ಕಿ ಉತ್ಸವ, ಬೆಳ್ಳಿ ಪಲ್ಲಕ್ಕಿ ಉತ್ಸವ, ಬಿಲ್ವ ವೃಕ್ಷ ವಾಹನೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಂಪ್ರತಿ ಜರುಗಲಿವೆ.
ಒಟ್ಟಾರೆಯಾಗಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಈ ಸಲ ಅತ್ಯಂತ ಯಶಸ್ವಿಯಾಗಿ ನಡೆಯಲಿದೆ.
ನಂದೀಶ ಪಬ್ಲಿಕ್ ನೆಕ್ಸ್ಟ್
PublicNext
07/04/2022 07:51 pm