ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ 161 ಅಡಿ ಆಂಜನೇಯ ವಿಗ್ರಹ ಲೋಕಾರ್ಪಣೆ

ತುಮಕೂರು: ಕುಣಿಗಲ್ ತಾಲೂಕಿನ ಬಿದನಗೆರೆ ಬಸವೇಶ್ವರ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಶ್ವ ವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವಿಡಿಯೋ ಮೂಲಕ ನಾಳೆ (ಎಪ್ರಿಲ್ 10 ಭಾನುವಾರ) ಶ್ರೀರಾಮ ನವಮಿಯಂದು ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶ್ರೀ ಕ್ಷೇತ್ರದ ಪೀಠಾಧಿಕಾರಿ ಡಾ.ಧನಂಜಯ ಗುರೂಜಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್​ ಮೂಲಕ ಕುಣಿಗಲ್​ ಸ್ಟಡ್​ಫಾರಂಗೆ ಆಗಮಿಸಿ ಬಳಿಕ ಕಾರಿನಲ್ಲಿ ಕ್ಷೇತ್ರಕ್ಕೆ ಬರಲಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಹರಿಹರ ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ್​ಜೋಶಿ, ನಾರಾಯಣಸ್ವಾಮಿ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಸಚಿವ ಡಾ.ಸಿ.ಎನ್​.ಅಶ್ವತ್ಥನಾರಾಯಣ್​, ಸಂಸದರಾದ ಡಿ.ಕೆ.ಸುರೇಶ್​, ಮುನಿಸ್ವಾಮಿ, ಶಾಸಕರಾದ ಡಾ.ಎಚ್​.ಡಿ.ರಂಗನಾಥ್​, ರಾಜುಗೌಡ, ಮಾಜಿ ಸಚಿವ ಡಿ.ನಾಗರಾಜಯ್ಯ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ, ಪಿಕಾರ್ಡ್​ ಬ್ಯಾಂಕ್​ ಅಧ್ಯಕ್ಷ ಡಿ.ಕೃಷ್ಣಕುಮಾರ್​, ಬಿಜೆಪಿ ಮುಖಂಡ ಎಚ್​.ಡಿ.ರಾಜೇಶ್​ಗೌಡ ಭಾಗವಹಿಸಲಿದ್ದಾರೆ ಎಂದು ಗುರೂಜಿ ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಉಪಹಾರ, ಊಟ, ಕುಡಿಯುವ ನೀರು, ಮಜ್ಜಿಗೆ, ಪಾನಕ, ಶೌಚಗೃಹ ವ್ಯವಸ್ಥೆ ಸೇರಿ ಮೂಲಸೌಕರ್ಯವನ್ನು ಕ್ಷೇತ್ರದ ವತಿಯಿಂದ ಕಲ್ಪಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ಧನಂಜಯ ಗುರೂಜಿ ಮನವಿ ಮಾಡಿದ್ದಾರೆ. ಡಿವೈಎಸ್​ಪಿ ಜಿ.ಆರ್​.ರಮೇಶ್​, ಸಿಪಿಐ ರಾಜು ನೇತೃತ್ವದ ತಂಡ ಭದ್ರತಾ ವ್ಯವಸ್ಥೆ ಕಲ್ಪಿಸಿದೆ ಎಂದು ಡಾ.ಧನಂಜಯ ಗುರೂಜಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

09/04/2022 03:37 pm

Cinque Terre

69.88 K

Cinque Terre

2

ಸಂಬಂಧಿತ ಸುದ್ದಿ