ತುಮಕೂರು : 5 ದಶಕಗಳಿಂದ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ಎಚ್ ಸಿ ಪ್ರಸನ್ನಕುಮಾರ್ ಅವರ ಅಂತ್ಯಸಂಸ್ಕಾರ ಭಾನುವಾರ ಗೊರವನಹಳ್ಳಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.
ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಧಾರ್ಮಿಕ ಮುಖಂಡರು, ರಾಜಕಾರಣಿಗಳು, ಹಲವು ಸ್ವಾಮೀಜಿಗಳು,ಸಾವಿರಾರು ಭಕ್ತರು ಅಂತ್ಯಸಂಸ್ಕಾರ ಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಪ್ರಸನ್ನಕುಮಾರ್ ಅವರ ಪುತ್ರ ಸುಬ್ರಹ್ಮಣ್ಯ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಿದರು.
PublicNext
25/07/2022 09:53 am