ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಕನ್ನಿಕಾ ವಿದ್ಯಾಪೀಠ ಶಾಲೆಯಲ್ಲಿ ರಾಧಾಕೃಷ್ಣರ ಕಲರವ.!

ಕೊರಟಗೆರೆ: ಪಟ್ಟಣದ ಕನ್ನಿಕಾ ವಿದ್ಯಾಪೀಠ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಕ್ಕಳಿಗೆ ರಾಧಾಕೃಷ್ಣ ವೇಷ ಭೂಷಣ ಏರ್ಪಡಿಸ ಲಾಗಿತ್ತು. ಶ್ರೀಕೃಷ್ಣನಿಗೆ ಕಾರ್ಯಕ್ರಮದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಪಾಲ್ಗೊಂಡಿದ್ದ ಮಕ್ಕಳಿಗೆ ಮತ್ತು ಪೋಷಕರಿಗೆ ಶ್ರೀಕೃಷ್ಣನಿಗೆ ಪ್ರಿಯವಾದ ಅವಲಕ್ಕಿ ಪ್ರಸಾದವನ್ನು ವಿತರಣೆ ಮಾಡಲಾಯಿತು.

ಮಕ್ಕಳಿಂದ ಹಲವು ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ ಎಸ್ ವಿ ರಘು, ನಿರ್ದೇಶಕ ರಾಧಾಕೃಷ್ಣ, ಮುಖ್ಯ ಶಿಕ್ಷಕ ಡಿ.ಎಂ ರಾಘವೇಂದ್ರ, ಶಿಕ್ಷಕಿಯರಾದ ಶಾರದಾ, ಅನುಶ್ರೀ, ದಿವ್ಯಶ್ರೀ, ಮಂಜುಳಾ, ಹಿಮ, ಸೇರಿದಂತೆ ಇತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು ಮಾಡಿದಂತಹ ನೃತ್ಯ ಎಲ್ಲರ ಗಮನ ಸೆಳೆಯಿತು.

ವರದಿ: ರಾಘವೇಂದ್ರ ದಾಸರಹಳ್ಳಿ

Edited By : Shivu K
PublicNext

PublicNext

19/08/2022 03:58 pm

Cinque Terre

26.81 K

Cinque Terre

0

ಸಂಬಂಧಿತ ಸುದ್ದಿ