ತುಮಕೂರು: ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ವ್ಯಕ್ತಿಯೋರ್ವ ಮುಂಜಿಗೆ ಹೆದರಿ ಮರಳಿ ಹಿಂದೂ ಧರ್ಮಕ್ಕೆ ಮರಳಿ ಬಂದಿದ್ದಾರೆ.
ಗ್ರಾಮದ ಓಂಕಾರೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಎಚ್.ಆರ್.ಚಂದ್ರಶೇಖರಯ್ಯ ಅವರು ಮುಬಾರಕ್ ಪಾಷಾ ಎಂದು ಹೆಸರು ಬದಲಿಸಿಕೊಂಡು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಬಳಿಕ ಮುಂಜಿಗೆ ಹೆದರಿ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ.
ಮುಸ್ಲಿಂ ಸಮುದಾಯದವರೇ ಹೆಚ್ಚಾಗಿರುವ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದ ಚಂದ್ರಶೇಖರಯ್ಯ, ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಮುಖಂಡ ತನ್ವಿರ್ ಜೊತೆ ಹೆಚ್ಚಿನ ಒಡನಾಟ ಇರಿಸಿಕೊಂಡಿದ್ದಾರೆ. ಕೊನೆಗೆ ತನ್ವಿರ್ ಅವರಿಗೆ ಸೇರಿದ ಮಸೀದಿಗೇ ಹೋಗಿ ಮತಾಂತರವಾಗಿದ್ದರು.
ಆದರೆ ಹಿಂದೂ ಧರ್ಮಕ್ಕೆ ವಾಪಸ್ ಆಗಿರುವ ಚಂದ್ರಶೇಖರಯ್ಯ ಅವರು, 'ಸಕ್ಕರೆ ಕಾಯಿಲೆ ಇರುವುದರಿಂದ ನನಗೆ ಮುಂಜಿ ಮಾಡಿಸಿಕೊಳ್ಳಲು ಆಗುವುದಿಲ್ಲ. ಮುಂಜಿ ಮಾಡಿದರೆ ಮಾತ್ರ ಮುಸ್ಲಿಮರಲ್ಲಿ ಸರಿಯಾಗಿ ಶವ ಸಂಸ್ಕಾರ ಮಾಡುವುದು' ಎಂದು ತಿಳಿಸಿದ್ದಾರೆ.
ಅರ್ಚಕ ಮತಾಂತರವಾಗಿರುವ ಸುದ್ದಿ ತಿಳಿದ ತಕ್ಷಣ ಮಾಜಿ ಸಚಿವ ಸೊಗಡು ಶಿವಣ್ಣ ಸ್ಥಳಕ್ಕೆ ಭೇಟಿ ನೀಡಿ, ಮರಳಿ ಹಿಂದೂ ಧರ್ಮಕ್ಕೆ ಬರುವಂತೆ ಚಂದ್ರಶೇಖರಯ್ಯ ಅವರ ಮನವೊಲಿಸಲು ಯತ್ನಿಸಿದ್ದರು. ಸೊಗಡು ಶಿವಣ್ಣ ಅವರ ಮಾತಿಗೆ ಬೆಲೆಕೊಡುವುದರ ಜೊತೆಗೆ ಮುಂಜಿಗೆ ಅಂಜಿ ತಾನು ವಾಪಸ್ ಬಂದಿದ್ದೇನೆ ಎಂದು ಚಂದ್ರಶೇಖರ್ ಹೇಳಿದರು.
PublicNext
21/08/2022 03:05 pm