ಕೊರಟಗೆರೆ: ಪಟ್ಟಣದ ಜಗಜ್ಯೋತಿ ಬಸವೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ಕಡೆಗೆ ಸೋಮವಾರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯವನ್ನು ವಹಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದರು. ನೂರಾರು ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶ್ರೀಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಪ್ರಸಾದ ಪಡಿಸುವ ಮೂಲಕ ಗಮನಸೆಳೆದರು. ಬಸವೇಶ್ವರ ದೇವರಿಗೆ ವಿಶೇಷ ಅಲಂಕಾರದೊಂದಿಗೆ ವಿಶೇಷ ಪೂಜೆ ನಡೆಸಲಾಯಿತು.
PublicNext
23/08/2022 08:38 am