ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣದ ದಶಕಗಳ ಕನಸು ಕೊನೆಗೂ ನನಸಾಗುವ ಕಾಲ ಸನಿಹವಾಗಿದೆ. ಸದ್ಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೋಟಿ ಕೋಟಿ ಹಿಂದೂಗಳಿಗೆ ಸಿಹಿ ಸುದ್ದಿ ಕೊಟ್ಟಿದೆ. ಹೌದು ರಾಮಮಂದಿರದ ಗರ್ಭಗುಡಿಯ ಫೋಟೋಗಳನ್ನು ಟ್ರಸ್ಟ್ ಹಂಚಿಕೊಂಡಿದೆ. ಸದ್ಯ ಮಂದಿರ ನಿರ್ಮಾಣದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, 2024ರ ಜನವರಿ 14ಕ್ಕೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನನಾಗಲಿದ್ದಾನೆ.
ಇದೇ ಸಂತಸದ ಸಂದರ್ಭದಲ್ಲಿ ಖುಷಿಯನ್ನು ದ್ವಿಗುಣಗೊಳಿಸುವಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮಮಂದಿರದ ಗರ್ಭಗುಡಿಯ ಫೋಟೋಗಳನ್ನ ಹಂಚಿಕೊಂಡಿದೆ. ಆಗಸ್ಟ್ 5, 2020… ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ನಿರ್ಮಾಣಕ್ಕೆ ಅದ್ದೂರಿಯಾಗಿ ಅಡಿಗಲ್ಲು ಹಾಕಿದ್ರು. ಸುಮಾರು ಐದು ಎಕರೆ ಜಾಗದಲ್ಲಿ ನಿರ್ಮಾಣವಾಗ್ತಿರೋ ಶ್ರೀರಾಮನ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ರು.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಗರ್ಭಗುಡಿ ನಿರ್ಮಾಣ ಕಾರ್ಯ ಡಿಸೆಂಬರ್ 2023 ರೊಳಗೆ ಪೂರ್ಣಗೊಳ್ಳುತ್ತೆ ಎನ್ನುವ ಭರವಸೆ ವ್ಯಕ್ತಪಡಿಸಿದೆ.
PublicNext
27/08/2022 08:30 pm