ಬೆಂಗಳೂರು: ಹಿರಿಯ ವಿಜ್ಞಾನಿ, ಪ್ರೊಫೆಸರ್ ರೊದ್ದಂ ನರಸಿಂಹ ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಒಂದು ವಾರದಿಂದ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 48 ಗಂಟೆಗಳಿಂದ ಕೃತಕ ಉಸಿರಾಟ ವ್ಯವಸ್ಥೆಯ ನೆರವಿನಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
1933ರ ಜು. 20ರಂದು ಜನಿಸಿದ್ದ ನರಸಿಂಹ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇ ಪದವಿ ಪಡೆದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹಾಗೂ ಕ್ಯಾಲಿಫೊರ್ನಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉನ್ನತ ವ್ಯಾಸಂಗ ಮತ್ತು ಸಂಶೋಧನೆ ನಡೆಸಿದ್ದರು.
ರೊದ್ದಂ ನರಸಿಂಹ ಅವರು ಭಾರತೀಯ ವೈಮಾನಿಕ ವಿಜ್ಞಾನಿ ಮತ್ತು ದ್ರವಚಲನ ಶಾಸ್ತ್ರಜ್ಞರಾಗಿದ್ದರು.
PublicNext
15/12/2020 08:02 am