ನವದೆಹಲಿ: ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಪರಿಹಾರವಾಗದ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಹೌದು. ಎರಡೂವರೆ ತಿಂಗಳೇ ಕಳೆಯುತ್ತಾ ಬಂದರೂ ಹೊಸ ಐಟಿ ಫೈಲಿಂಗ್ ಪೋರ್ಟಲ್‌ನಲ್ಲಿನ ತೊಂದರೆಯನ್ನು ಸರಿ ಪಡಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಜನರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಜನರಿಂದ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಈಗ ಹಣಕಾಸು ಸಚಿವಾಲಯ ಸೋಮವಾರ ಸಲೀಲ್ ಪರೇಖ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಆದಾಯ ತೆರಿಗೆ ಸಲ್ಲಿಕೆಯ ನೂತನ ಇ-ಫೈಲಿಂಗ್ ಪೋರ್ಟಲ್ ಅಭಿವೃದ್ಧಿಪಡಿಸಿದ ಇಸ್ಫೋಸಿಸ್ ಸಂಸ್ಥೆಗೆ 2019ರ ಜನವರಿಯಿಂದ 2021ರ ಜೂನ್‍ವರೆಗೆ 164.5 ಕೋಟಿ ರೂ. ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿತ್ತು.
PublicNext
22/08/2021 04:56 pm