ಕಾರವಾರ: ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೊಡುವ ಪ್ರತಿಷ್ಟಿತ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿ ಕನ್ನಡಿಗನಿಗೆ ಒಲಿದಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದ ದಿನೇಶ್ ವಸಂತ ಹೆಗಡೆ, ನಾಸಾದ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಅನುದಾನದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದಿನೇಶ್ ವಸಂತ ಹೆಗಡೆ ಸದ್ಯ ಅಮೆರಿಕದ ಹಂಟ್ಸ್‍ವಿಲ್‍ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ. ಅವರೊಂದಿಗೆ ಕ್ಯಾಥರೀನ್ ಡೇವಿಡ್ಸನ್ ಎಂಬವರೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಬ್ಬರೂ ಭಾರತೀಯ ರೂಪಾಯಿಯಂತೆ ತಲಾ 1 ಕೋಟಿ 42 ಸಾವಿರ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ.
PublicNext
20/08/2021 08:01 am