ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದಲ್ಲಿ 20 ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ : ವಿಡಿಯೋ ವೈರಲ್

ಹೊಸದಿಲ್ಲಿ: ಟ್ರಕ್ ಮೂಲಕ ಸಾಗಿಸುತ್ತಿದ್ದ ಸುಮಾರು 20 ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ ಆವರಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಜಿತೇಂದ್ರ ಇವಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಟ್ರಕ್ ಮೂಲಕ ಸಾಗಿಸುವಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡು ಟ್ರಕ್ ಧಗಧಗಿಸುತ್ತಿದ್ದಂತೆ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇನ್ನು ಟ್ರಕ್ ನಲ್ಲಿ ಒಟ್ಟು 40 ಸ್ಕೂಟರ್ ಗಳನ್ನು ಸಾಗಿಸಲಾಗುತ್ತಿತ್ತು ಎಂದು ಕೆಲವು ವರದಿಗಳು ತಿಳಿಸಿವೆ. ಗಮನಿಸಬೇಕಾದ ಅಂಶವೆಂದರೆ ಕಳೆದ ಮೂರು ವಾರಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಐದನೇ ಘಟನೆ ಇದಾಗಿದೆ.ಮಾರ್ಚ್ 26 ರಂದು, ಪುಣೆಯಲ್ಲಿ Ola S1 Pro ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡಿತು, ನಂತರ ತಮಿಳುನಾಡಿನ ವೆಲ್ಲೂರಿನಲ್ಲಿ ಓಕಿನಾವಾ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತು.

ಮಾರ್ಚ್ 28 ರಂದು ತಮಿಳುನಾಡಿನ ತಿರುಚ್ಚಿಯಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದರೆ, ನಾಲ್ಕನೇ ಘಟನೆ ಮಾರ್ಚ್ 29 ರಂದು ಚೆನ್ನೈನಿಂದ ವರದಿಯಾಗಿದೆ.ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ತೊತ್ತಿಕೊಳ್ಳುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಬಳಸುವ ಬ್ಯಾಟರಿಗಳ ಗುಣಮಟ್ಟ ಮತ್ತು ಸಂಬಂಧಿತ ವ್ಯವಸ್ಥೆಗಳು ಈ ಘಟನೆಗಳಿಗೆ ಕಾರಣ ಎಂದು ತಜ್ಞರು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

13/04/2022 09:15 am

Cinque Terre

46.3 K

Cinque Terre

0