ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

11 ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು

ಶಿಕಾರಿಪುರ : ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮಗ ಅಕ್ಷಯ್ (11 ತಿಂಗಳು) ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು0 ಮಗುವಿನ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದೆ.

ಮಹಾಲಯ ಅಮವಾಸ್ಯೆ ದಿನವಾದ ಭಾನುವಾರ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಪುನಸ್ಕಾರದ ಕಡೆ ಗಮನ ಕೊಟ್ಟ ಸಂದರ್ಭ, ಅಂಬೆಗಾಲು ಇಡುತ್ತಿದ್ದ ಮಗು ಅರಿವಿಲ್ಲದಂತೆ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ.

ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ. ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯಾಧಿಕಾರಿಗಳ ತಂಡ ಮಗುವಿನ ಕಳೆಬರಹವನ್ನು ಪೋಷಕರಿಗೆ ನೀಡುವಾಗ ಕುಟುಂಬಸ್ಥರ ಆಕ್ರಂದನ ನೆರೆದಿದ್ದ ಜನರ ಹೃದಯ ಹಿಂಡುತ್ತಿತ್ತು. ಮೃತನ ಮೂರು ವರ್ಷದ ಅಕ್ಕ ನಕ್ಷತ್ರ ಹಾಗೂ ತಂದೆ ತಾಯಿಯ ಪಾಡು ಹೇಳತೀರದಾಗಿತ್ತು.

ಭಾನುವಾರ ಸಂಜೆಯೇ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಪುಟ್ಟ ಮಗುವಿನ ಶವ ಸಂಸ್ಕಾರ ನಡೆಯಿತು. ಇಡೀ ಊರಿಗೆ ಊರೇ ಶವಸಂಸ್ಕಾರದಲ್ಲಿ ಭಾಗಿಯಾಗಿದ್ದು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಸಂಪೂರ್ಣ ಮೌನ ಆವರಿಸಿದೆ.

Edited By : Nirmala Aralikatti
Kshetra Samachara

Kshetra Samachara

25/09/2022 05:57 pm

Cinque Terre

2.68 K

Cinque Terre

0