ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಸಾಗರದಲ್ಲಿ ಸರಣಿ ಅಪಘಾತ: ಗಾಯಾಳುಗಳು ಆಸ್ಪತ್ರೆಗೆ ದಾಖಲು

ಶಿವಮೊಗ್ಗ: 2 ಕಾರು, ಒಂದು ಬಸ್ಸು, ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಅಂಬಾಪುರ ಬಳಿ ಇಂದು ಸಂಜೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಹಾಗೂ ಶ್ರೀಧರ ಎಂಬುವವರಿಗೆ ತೀವ್ರ ಗಾಯವಾಗಿದ್ದು, ಗಾಯಾಳುಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಮಾರುತಿ ವ್ಯಾಗನ್‌ಆರ್ ಕಾರು ಚಾಲಕನ ಅಜಾಗರೂಕತೆಯಿಂದಾಗಿ ಬಸ್ಸು, ಮಾರುತಿ ಜೆನ್ ಹಾಗೂ ಬೈಕಿಗೆ ಡಿಕ್ಕಿಯಾಗಿದೆ. ಈ ವೇಳೆ ಎರಡೂ ಕಾರುಗಳು ಜಖಂ ಆಗಿವೆ. ಬೈಕ್ ಅಪ್ಪಚ್ಚಿಯಾಗಿದ್ದು, ಬಸ್‌ಗೆ ಹಾನಿಯಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಪ್ರವೀಣ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸುಜಾತ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

Edited By : Shivu K
PublicNext

PublicNext

30/09/2022 01:23 pm

Cinque Terre

24.86 K

Cinque Terre

0