ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಎಲೆಕ್ಟ್ರಿಕ್-ಎಲೆಕ್ಟ್ರಾನಿಕ್ ಅಂತರಾಷ್ಟ್ರೀಯ ಸಮ್ಮೇಳನ

ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜು ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಸ್ ಮಂಗಳೂರಿನ ಉಪವಿಭಾಗದ ವತಿಯಿಂದ ಅ.14 ಮತ್ತು 15ರಂದು ಎರಡು ದಿನಗಳ ಕಾಲ ಕಾಲೇಜಿನ ಎಂಬಿಎ ಎಂಸಿಎ ಸಭಾಂಗಣದಲ್ಲಿ ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಅಂತರಾಷ್ಟ್ರೀಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ. ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿದ ಅವರು, ಎಲೆಕ್ಟ್ರಿಕಲ್ ಸರ್ಕ್ಯೂಟ್ ರೊಬೊಟಿಕ್ಸ್, ವಿಎಲ್ಎಸ್ಐ ನಂತಹ ಅನೇಕ ನಾವೀನ್ಯ ವಿಷಯಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ. ಸಮ್ಮೇಳನದಲ್ಲಿ ವಿಶ್ವದ ತಾಂತ್ರಿಕ ಪರಿಣಿತರು, ಉದ್ಯಮಿಗಳು, ಶೈಕ್ಷಣಿಕ ತಜ್ಞರು ಭಾಗವಹಿಸಲಿದ್ದು, ಅನೇಕ ಸಂಶೋಧನಾರ್ಥಿಗಳು ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ ತಿಳಿಸಿದ್ದಾರೆ.

ಅ.14ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಸಿಡಾಕ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್.ಡಿ. ಸುದರ್ಶನ್ ಸಮ್ಮೇಳನ ಉದ್ಘಾಟಿಸಲಿದ್ದು, ಎರಡು ದಿನಗಳ ಕಾರ್ಯಕ್ರಮದಲ್ಲಿ ಜರ್ಮನಿಯ ಕಾರ್ಪೊರೇಟ್ ಸಂಶೋಧನಾ ಕೇಂದ್ರದ ಸಂಶೋಧನಾರ್ಥಿ ಹೈಕೊ ಕೊಜಿಯಲಕ್ ಅವರು ಕಾರ್ಖಾನೆಗಳ ಸ್ವಯಂಚಾಲಿತ ಯಾಂತ್ರಿಕರಣದಲ್ಲಿನ ಸವಾಲುಗಳು, ಪಿಲಾನಿಯ ಬಿಟ್ಸ್ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಸ್ನೇಹಂಸುಸಾಹ ಅವರು ನ್ಯೂರಲ್ ನೆಟ್ಸ್ ಕರಿತು, ಬೆಂಗಳೂರು ಐಐಎಸ್ಸಿ ಪ್ರಾಧ್ಯಾಪಕ ಡಾ.ಎ.ಜಿ.ರಾಮಕೃಷ್ಣನ್ ಪ್ರಾಣಾಯಾಮದ ಮಹತ್ವದ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸಮ್ಮೇಳನ ಸಂಘಟನಾ ಮುಖ್ಯಸ್ಥ ಡಾ.ಮಂಜುನಾಥ ಮಾತನಾಡಿ, ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಸಮ್ಮೇಳನ ನಮ್ಮ ಕಾಲೇಜಿನಲ್ಲಿ ನಡೆಯುತ್ತಿದ್ದು, ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

Edited By : Manjunath H D
PublicNext

PublicNext

13/10/2022 11:00 pm

Cinque Terre

45.18 K

Cinque Terre

0

ಸಂಬಂಧಿತ ಸುದ್ದಿ