ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲೂ ಎನ್‌ಐಎ ದಾಳಿ- 7 ಜನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲೂ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಜಿಲ್ಲೆಯ 7 ಜನರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ನಗರದಲ್ಲಿ ಇಂದು ಬೆಳಗಿನ ಜಾವ ಮೂರು ಗಂಟೆಗೆ ಎನ್‌ಐಎ ಅಧಿಕಾರಿಗಳು ಲಷ್ಕರ್ ಮೊಹಲ್ಲಾದ ಯಾಲಕಪ್ಪನ ಬೀದಿಯಲ್ಲಿರುವ ಪಿಎಫ್ಐ ರಾಜ್ಯ ವಲಯ ಅಧ್ಯಕ್ಷ ಶಾಹಿದ್ ಖಾನ್‌ ಮನೆ ದಾಳಿ ನಡೆಸಿದ್ದಾರೆ. ಪರಿಶೀಲನೆ ನಂತರ ಬೆಳಗ್ಗೆ 6 ಗಂಟೆಗೆ ಶಾಹಿದ್ ಖಾನ್‌ರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಹಿದ್ ಖಾನ್ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಹಾವೇರಿ ಜಿಲ್ಲೆಯ ವಲಯ ಪಿಎಫ್ಐ ಅಧ್ಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಶಾಹೀದ್ ಖಾನ್ ಮನೆಯಲ್ಲಿ 20 ಲಕ್ಷಕ್ಕೂ ಅಧಿಕ ಹಣದ ಜೊತೆ 5 ಕೀ ಪ್ಯಾಡ್ ಮೊಬೈಲ್‌ ಹಾಗೂ 2 ಸ್ಮಾರ್ಟ್ ಫೋನ್‌ಗಳು ಪತ್ತೆಯಾಗಿವೆ ಎನ್ನಲಾಗಿದೆ.

ಡಿಜೆ ಹಳ್ಳಿ ಕೆಜೆ ಹಳಿ ಪ್ರಕರಣದಲ್ಲಿ ಹಣಕಾಸಿನ ನೆರವು ನೀಡಿದ ಆರೋಪದ ಹಿನ್ನೆಲೆಯಲ್ಲಿ ಮತ್ತು ಗಲಭೆಕೋರರಿಗೆ ಹಣ ವರ್ಗಾವಣೆ ಮಾಡಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳಿಂದ ಈ ದಾಳಿ ನಡೆಸಲಾಗಿದೆ.

Edited By : Manjunath H D
PublicNext

PublicNext

22/09/2022 08:44 pm

Cinque Terre

39.73 K

Cinque Terre

0