ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡೆತ್ ನೋಟ್ ಬರೆದಿಟ್ಟು ಹೋಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಶಿವಮೊಗ್ಗ : ತುಮಕೂರಿನಿಂದ ಶಿವಮೊಗ್ಗಕ್ಕೆ ಬಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಬಸ್ ಸ್ಟಾಂಡ್ ನ ಬಳಿ ಇರುವ ಹೋಟೆಲ್ ನ ರೂಂ ವೊಂದರಲ್ಲಿ ನಡೆದಿದೆ.ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಜುನಾಥ್ (26) ಎಂದು ಗುರುತಿಸಲಾಗಿದೆ. ಮಂಜುನಾಥ್, ತುಮಕೂರಿನ ಕೆರೆಸೂರಗೊಂಡನಹಳ್ಳಿಯ ನಿವಾಸಿಯಾಗಿದ್ದು, ಸೆ. 13 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಮಂಜುನಾಥ್ ತನ್ನ ದೊಡ್ಡಮ್ಮನ ಮಗಳು ಸುಧಾಳನ್ನು ಕೊಲೆ ಮಾಡಿದ್ದ ಎಂಬ ಆರೋಪ ಕೇಳಿಬಂದಿದ್ದು, ಈ ಕೊಲೆ ವಿಚಾರವನ್ನು ಡೆತ್ ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/09/2022 07:56 am

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ