ಶಿವಮೊಗ್ಗ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನಪೇಟೆಯ ಹಾಲುಗುಡ್ಡೆ ಗ್ರಾಮದಲ್ಲಿಯೇ ಈ ಘಟನೆ ನಡೆದಿದ್ದು, 24 ವರ್ಷದ ಅನುಷಾ ಎಂಬ ಯುವತಿಯೇ ಆತ್ಮಹತ್ಯೆ ಮಾಡಿಕೊಂಡವಳು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪ್ರಿಯಕರ ಮಂಜುನಾಥ್ ಪರಾರಿಯಾಗಿದ್ದಾನೆ.
ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅನುಷಾಳನ್ನು ಹೊಸನಗರ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಹೊಸನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
PublicNext
18/09/2022 07:42 pm