ಶಿವಮೊಗ್ಗ: ಶಿವಮೊಗ್ಗದಲ್ಲಿ ತುಂಗಾರತಿ ಪೂಜೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಈ ತುಂಗಾರತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೊದಲ ಬಾರಿಗೆ ತುಂಗಾರತಿ ಕಾರ್ಯಕ್ರಮ ನಡೆಸಲಾಗಿದ್ದು, ನಗರದ ಕೋರ್ಪಲಯ್ಯನ ಛತ್ರದ ಬಳಿಯ ತುಂಗಾ ಮಂಟಪದ ಆವರಣದಲ್ಲಿ ನಡೆದ ಈ ಅರ್ಥಪೂರ್ಣ ಹಾಗೂ ವಿಶಿಷ್ಟ ಕಾರ್ಯಕ್ರಮದಲ್ಲಿ ಮಂಗಳೂರಿನ ಧರ್ಮಶಾಸ್ತ ಚೆಂಡೆ ಬಳಗದಿಂದ ಚೆಂಡೆ ಹಾಗೂ ಮಂಗಳವಾದ್ಯ ಗಮನ ಸೆಳೆಯಿತು.
ಇಲ್ಲಿನ ತುಂಗಾ ಸೇತುವೆ, ಮಂಟಪಕ್ಕೆ ಸೊಬಗಿನ ದೀಪಾಲಂಕಾರ, ಹೂವಿನ ಅಲಂಕಾರ, ಬಾಣ ಬಿರುಸುಗಳ ಪ್ರದರ್ಶನ ಕಣ್ಮನ ಸೆಳೆಯಿತು. ಈ ವೇಳೆ ಜನಪ್ರತಿನಿಧಿಗಳು ತುಂಗಾನದಿಗೆ ಆರತಿ ಬೆಳಗಿ ಪೂಜೆ ನೆರವೇರಿಸಿದರು.
7 ಮಂದಿ ಋತ್ವಿಜರಿಂದ ತುಂಗೆಗೆ ಆರತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶ್ರೀ ಗಂಗಾ ಪರಮೇಶ್ವರಿ ದೇವಾಲಯ ಆವರಣದಿಂದ ಹೊಳೆ ಮಂಟಪದವರೆಗೆ ವಿವಿಧ ವಾದ್ಯಗಳೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಎಂ.ಎಲ್.ಸಿ. ಭಾನುಪ್ರಕಾಶ್, ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಗೂ ನೂರಾರು ನಾಗರಿಕರು ಉಪಸ್ಥಿತರಿದ್ದರು.
PublicNext
03/10/2022 10:41 pm