ಸಾಗರ : ತಾಲೂಕಿನ ತಾಳಗುಪ್ಪ ಹೋಬಳಿಯ ಕೆ ಜಿ ಕೊಪ್ಪ ಗ್ರಾಮದ ಸರ್ವೆ ನಂ.24ರಲ್ಲಿ ಜಾನುವಾರುಗಳ ಮೇವಿಗಾಗಿ ಮೀಸಲಿಟ್ಟ ಜಮೀನು ಕೆಲವು ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು ತಕ್ಷಣ ತಾಲೂಕು ಆಡಳಿತ ಗೋಮಾಳ ಜಮೀನು ತೆರವು ಮಾಡಿ ಕೊಡುವಂತೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಬುಧವಾರ ಗ್ರಾಮಸ್ಥರು ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಿದರು.
ಕೆ ಜಿ ಕೊಪ್ಪ ಗ್ರಾಮದ ಸರ್ವೆ ನಂ24ರಲ್ಲಿ ಜಾನುವಾರುಗಳ ಮೇವಿಗಾಗಿ ಮೀಸಲಿಟ್ಟ ಜಮೀನು ಅಗಿದೆ. ಸದರಿ ಜಮೀನನ್ನು ಈ ಹಿಂದೆ ತಡಗಳಲೆ ಗ್ರಾಮದ ಕೆಲವರು ಸುಮಾರು 2 ಎಕರೆ ಗೋಮಾಳ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ದಿ.19/11/2024 ರಂದು ತಹಶೀಲ್ದಾರ್ ರವರ ಆದೇಶದ ಮೇರೆಗೆ ಉಪ ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಜಮೀನನ್ನು ತೆರವು ಮಾಡಿ ಹೋಗಿದರು.ನಂತರ ಸರ್ವೆ ನಂಬರಿನ ಜಮೀನಿನಲ್ಲಿ ಸುಮಾರು 20 ಎಕರೆ ಜಮೀನನ್ನು ಜೆಸಿಬಿ ವಾಹನ ಬಳಸಿ ಒತ್ತುವರಿ ಮಾಡಿಕೊಂಡಿರುವ ಘಟನೆ ನಡೆದಿದೆ. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗೋಮಾಳ ಒತ್ತುವರಿ ತೆರವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಮನವಿಯಲ್ಲಿ ಆಗ್ರಹಿಸಿದ್ದಾರೆ.
Kshetra Samachara
20/11/2024 05:39 pm