ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಹುಣಸೋಡು ಸ್ಫೋಟದಲ್ಲಿ ಹಾನಿಗೊಳಗಾದ ಮನೆಗಳಿಗೆ ಪರಿಹಾರಕ್ಕೆ ಆಗ್ರಹ

ಶಿವಮೊಗ್ಗ : ಹುಣಸೋಡು ಸ್ಪೋಟದಿಂದ ಹಾನಿಗೊಳಗಾಗಿರುವ ಮನೆಗಳ ಸಂತ್ರಸ್ಥರಿಗೆ ತಕ್ಷಣವೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಇಂದು ನವ ಕರ್ನಾಟಕ ನಿರ್ಮಾಣ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಈ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. 2021 ರ ಜನವರಿ 21 ರಂದು ಹುಣಸೋಡು ಸ್ಪೋಟ ನಡೆದಿದ್ದು, ಈ ಸ್ಪೋಟದಿಂದ ಸುತ್ತಮುತ್ತಲಿನ ಅನೇಕ ಗ್ರಾಮಗಳಲ್ಲಿ ಹಲವು ಮನೆಗಳಿಗೆ ಹಾನಿಯಾಗಿತ್ತು.

ಮನೆಗಳ ಗೋಡೆಗಳು ಬಿರುಕು ಬಿಟ್ಟು, ಛಾವಣಿ ಹಾರಿ ಹೋಗಿದ್ದು, ಅನೇಕ ಮನೆಗಳಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಸ್ಪೋಟದಿಂದ ಹಾನಿಯಾಗಿತ್ತು. ತಮ್ಮದಲ್ಲದ ತಪ್ಪಿನಿಂದ ಗೆಜ್ಜೆನಹಳ್ಳಿ, ಹನುಮಂತ ನಗರ, ಹುಣಸೋಡು, ಅಬ್ಬಲಗೆರೆ, ಬಸವನಗಂಗೂರು, ಚನ್ನಮುಂಬಾಪುರ, ಬೊಮ್ಮನಕಟ್ಟೆ, ಕಲ್ಲಗಂಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಲಕ್ಷಾಂತರ ರೂ ಮೊತ್ತದ ಆಸ್ತಿ, ಪಾಸ್ತಿ ಕಳೆದುಕೊಂಡಿದ್ದರೆಂದು ದೂರಿದ್ದಾರೆ.

ಈವರೆಗೆ ಸುಮಾರು 850 ಸಂತ್ರಸ್ಥರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದು, ಜಿ. ಪಂ. ಇಂಜಿನಿಯರ್ ವಿಭಾಗದ ಅಧಿಕಾರಿಗಳು ಮನೆಗಳು ಶೇ. 10 ರಷ್ಟು ಹಾನಿಯಾಗಿರುವುದಾಗಿ ವರದಿ ನೀಡಿದ್ದಾರೆ.

ಘಟನೆಯಲ್ಲಿ ಕಾಣೆಯಾದವರ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ಜೊತೆಗೆ ಒಂದು ವರ್ಷ ಹತ್ತು ತಿಂಗಳು ಕಳೆದರೂ ಇಲ್ಲಿವರೆಗೆ ಸಂತ್ರಸ್ಥರಿಗೆ ಪರಿಹಾರ ಸಿಕ್ಕಿಲ್ಲ ಎಂದು ದೂರಿದ್ದಾರೆ. ಜಿಲ್ಲಾಡಳಿತ ತಕ್ಷಣವೇ ಸಂತ್ರಸ್ಥರಿಗೆ ಪರಿಹಾರ ನೀಡಬೇಕು. ಮತ್ತು ಮೇಲ್ಕಂಡ ಗ್ರಾಮಗಳ ಸಮೀಪದಲ್ಲಿರುವ ಕ್ವಾರೆಗಳು, ಕ್ರಷರ್ ಗಳನ್ನು ಮುಚ್ಚಿಸಬೇಕು. ಇಲ್ಲವಾದಲ್ಲಿ ಸಂತ್ರಸ್ಥರು ಉಗ್ರ ಹೋರಾಟ, ಉಪವಾಸ ಸತ್ಯಾಗ್ರಹ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

Edited By :
Kshetra Samachara

Kshetra Samachara

03/10/2022 04:08 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ