ಶಿವಮೊಗ್ಗ: ಶಂಕಿತರ ಬಂಧನ ಕೇಸ್ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಆಗಷ್ಟ್ 15ರಂದು ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ಚಾಕು ಇರಿತ ಪ್ರಕರಣ ದಾಖಲಾಗಿತ್ತು. ಈ ಕೇಸ್ ತನಿಖೆ ವೇಳೆ ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಕುರಿತು ಮಾಹಿತಿ ಲಭ್ಯವಾಗಿತ್ತು ಎಂದು ADGP ಅಲೋಕ್ ಕುಮಾರ್ ಹೇಳಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಮಾಜ್ ಮುನೀರ್ ಅಹಮದ್ (22) ಮತ್ತು ಶಿವಮೊಗ್ಗದ ಸಿದ್ಧೇಶ್ವರ ನಗರದ ಸಯ್ಯದ್ ಯಾಸೀನ್ ಅಲಿಯಾಸ್ ಬೈಲ್ (21) ಎಂಬುವರನ್ನು ಬಂಧಿಸಲಾಗಿದೆ. ಇನ್ನು ತೀರ್ಥಹಳ್ಳಿ ಗುಡ್ಡೆಕೊಪ್ಪದ ಶಾರೀಕ್‌ಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಲೋಕ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
PublicNext
21/09/2022 06:29 pm