ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೊರಬ: ವಕ್ಫ್ ಆಸ್ತಿ ವಿಚಾರ - ಜಮೀರ್ ವಿರುದ್ಧ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಗಂಭೀರ ಆರೋಪ

ಸೊರಬ: ಸಚಿವ ಜಮೀರ್ ಅಹ್ಮದ್ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಕ್ಫ್ ವಿಚಾರದಲ್ಲಿ ರಾಜ್ಯದ ಜನತೆಗೆ ತಲ್ಲಣವನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ, ಮಠ ಮಾನ್ಯಗಳ ಜಮೀನು ಹಾಗೂ ಹಿಂದೂ-ಮುಸ್ಲಿಂ ಸೇರಿದಂತೆ ವಿವಿಧ ಸಮುದಾಯದವರ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಾಗಿರುವುದು ಪ್ರಸ್ತುತ ರಾಷ್ಟ್ರ ವ್ಯಾಪ್ತಿಯಲ್ಲಿ ಚರ್ಚೆಯಾಗುತ್ತಿದೆ.

ರಾಷ್ಟ್ರದಲ್ಲಿ ಸುಮಾರು 30 ಲಕ್ಷ ಎಕರೆ ಪ್ರದೇಶ ವಕ್ಫ್ ಬೋರ್ಡ್‌ಗೆ ಸೇರಿಸಲಾಗಿದೆ. ರಾಜ್ಯದಲ್ಲಿ ದೊರೆತಿರುವ ಅಂಕಿ ಅಂಶದ ಪ್ರಕಾರ 1.16 ಲಕ್ಷ ಎಕರೆ ಪ್ರದೇಶ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಬೆಲೆ ಬಾಳುವ ಆಸ್ತಿಯನ್ನು ತಕ್ಷಣವೇ ಸರ್ಕಾರ ವಶಕ್ಕೆ ಪಡೆಯುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಸಚಿವ ಜಮೀರ್ ಅಹ್ಮದ್ ತಮ್ಮ ಅಧಿಕಾರಿವನ್ನು ದುರ್ಬಳಕೆ ಮಾಡಿಕೊಂಡು ರೈತರ ಸಾವಿರಾರು ಎಕರೆ ಪ್ರದೇಶವನ್ನು ವಕ್ಫ್ ಬೋರ್ಡ್‌ಗೆ ಸೇರಿಸಿದ್ದಾರೆ. ಈ ನಡುವೆ ವಕ್ಫ್ ಆಸ್ತಿಯನ್ನು ಹಿಂದಿನಿಂದಲೂ ಕಾಂಗ್ರೆಸ್‌ನ ನಾಯಕರು ಲೂಟಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ.

ನ. 25ರಿಂದ 27ರವರೆಗೆ ಬೀದರ್, ರಾಯಚೂರು, ಕಲಬುರಗಿ ಭಾಗದಲ್ಲಿ ಪಕ್ಷದ ಸಮಾನ ಮನಸ್ಕರರು ಒಗ್ಗೂಡಿ ಪ್ರವಾಸ ಮಾಡುವ ಯೋಜನೆ ರೂಪಿಸಲಾಗಿದೆ ಎಂದರು.

ವರದಿ: ಮಧು ರಾಮ್ ಪಬ್ಲಿಕ್ ನೆಕ್ಸ್ಟ್ ಸೊರಬ

Edited By : Vinayak Patil
PublicNext

PublicNext

19/11/2024 09:40 pm

Cinque Terre

37.68 K

Cinque Terre

0

ಸಂಬಂಧಿತ ಸುದ್ದಿ