ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಭೂತಾನ್ ನಿಂದ ಅಡಿಕೆ ಆಮದು ರದ್ದುಗೊಳಿಸಬೇಕು : ರೈತ ಸಂಘದ ರಾಜ್ಯಾಧ್ಯಕ್ಷರ ಆಗ್ರಹ

ಶಿವಮೊಗ್ಗ : ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಅ. 14 ರಂದು ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ ಅಂದು ಬೆಳಿಗ್ಗೆ 10ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆದು ನಂತರ ಅಲ್ಲಿ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ, ಕೇಂದ್ರದ ವಾಣಿಜ್ಯ, ಕೃಷಿ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದೆಂದು ತಿಳಿಸಿದ್ದಾರೆ.

ಭೂತಾನ್ ನಿಂದ 17ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆಯನ್ನು ಪ್ರತಿವರ್ಷ ಎಂಐಪಿ ಷರತ್ತು ಇಲ್ಲದೆ ಆಮದು ಮಾಡಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಇದು ಮುಂದಿನ ದಿನಗಳಲ್ಲಿ 50ಸಾವಿರ ಮೆಟ್ರಿಕ್ ಟನ್ಗಿಂತಲೂ ಆಮದನ್ನು ಹೆಚ್ಚಿಸಬಹುದು. ಆಗ ನಮ್ಮ ದೇಶದ ಅಡಿಕೆ ಬೆಲೆಯು ಕೂಡ ಕಡಿಮೆಯಾಗುವ ಸಾಧ್ಯತೆ ಇದೆ.

ರೈತ ಸಂಘಟನೆ ಮತ್ತು ಅಡಿಕೆ ಸಹಕಾರಿ ಸಂಸ್ಥೆಗಳು ಪರಿಷ್ಕರಣಾ ಕೆ.ಜಿ ಅಡಿಕೆಗೆ ಆಮದು ಸುಂಕವನ್ನು 260ರೂ. ನಿಂದ 360ರೂ. ಗಳಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಈಗಾಗಲೇ ಬೇಡಿಕೆಯನ್ನು ಸಲ್ಲಿಸಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಆಮದು ಸುಂಕವಿಲ್ಲದೆ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ದೂರಿದ್ದಾರೆ.

ಗೃಹ ಮಂತ್ರಿ ಮತ್ತು ಅಡಿಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರರವರು ಕೇಂದ್ರ ಸರ್ಕಾರಕ್ಕೆ ನಿಯೋಗ ಕರೆದುಕೊಂಡು ಹೋಗಲಾಗುವುದು ಎಂದು ಹೇಳಿರುವುದು ಸ್ವಾಗತರ್ಹ. ಅದಷ್ಟು ಬೇಗ ನಿಯೋಗ ಹೋಗಬೇಕೆಂದು ಬಸವರಾಜಪ್ಪ ಒತ್ತಾಯಿಸಿದ್ದಾರೆ.

Edited By : Nagesh Gaonkar
PublicNext

PublicNext

07/10/2022 06:20 pm

Cinque Terre

26.17 K

Cinque Terre

0