ಶಿವಮೊಗ್ಗ: ನಮ್ಮ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮಸ್ಥರು ಹಾಗೂ ಮಕ್ಕಳು ಪಾದಯಾತ್ರೆ ನಡೆಸಿದ್ದಾರೆ. ದೊಡ್ಡೇರಿ ಗ್ರಾಮದಿಂದ ಭದ್ರಾವತಿ ತಾಲೂಕು ಕಚೇರಿಯವರೆಗೆ ಪಾದಯಾತ್ರೆ ನಡೆಸಿದ ಮಕ್ಕಳು ಹಾಗೂ ಪೋಷಕರು, ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸುವಂತೆ ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಸುಮಾರು ಮಕ್ಕಳು ಹೈಸ್ಕೂಲ್ ವ್ಯಾಸಂಗ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಹೈಸ್ಕೂಲ್ ಇಲ್ಲದ ಕಾರಣ ಪ್ರತಿನಿತ್ಯ ಹತ್ತಾರು ಕಿ.ಮೀ. ದೂರದೂರಿಗೆ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಈಗಾಗಲೇ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
PublicNext
15/09/2022 04:43 pm