ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭರದಿಂದ ಸಾಗುತ್ತಿದೆ ಶಿವಮೊಗ್ಗ ಏರ್ ಪೋರ್ಟ್ ಕಾಮಗಾರಿ : ಮುಂದಿನ ತಿಂಗಳು ಬರಲಿದೆ ಡಿಸಿಪ್ಲನರಿ ತಂಡ

ಶಿವಮೊಗ್ಗ : ಮುಂದಿನ ಒಂದು ತಿಂಗಳಿನಲ್ಲಿ ದೆಹಲಿ ವಿಮಾನಯಾನ ಸಚಿವಾಲಯದ ' ಮಲ್ಟಿ ಡಿಸಿಪ್ಲಿನರಿ ತಂಡ ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕೊನೆಯ ಹಂತದ ವೀಕ್ಷಣೆಗೆ ಆಗಮಿಸುತ್ತಿದ್ದು. ಈ ಹಿನ್ನಲೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿ ವಿಮಾನಯಾನ ಸಚಿವಾಲಯದಿಂದ ಹೆಚ್ಚುವರಿ ಕಾರ್ಯದರ್ಶಿ ಉಷಾ ಪದಿ ಅವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ, ವಿಮಾನ ನಿಲ್ದಾಣದ ಕಾಮಗಾರಿ ವೀಕ್ಷಿಸಿ, ವಿವಿಧ ಏರ್ ಲೈನ್ ಸಂಸ್ಥೆಗಳೊಂದಿಗೆ ವರ್ಚುವಲ್ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಭಾಗವಹಿಸಿದರು.

ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಯಾವುದೇ ಒಂದು ರಾಜ್ಯ, ಜಿಲ್ಲೆ, ಸಂಸ್ಥೆ ಅಥವಾ ವ್ಯವಸ್ಥೆ ನಿರೀಕ್ಷಿತ ಪ್ರಗತಿ ಸಾಧಿಸಲು ಮೂಲಭೂತ ಸೌಕರ್ಯಗಳು ಇರಬೇಕಾದುದು ಅಗತ್ಯ. ಬಹುದಿನಗಳ ಈ ಕನಸಿನ ಯೋಜನೆಯ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸತತ ಪರಿಶ್ರಮ, ಸಂಕಲ್ಪ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಹಕಾರವೂ ಕೂಡ ಸ್ಮರಣೀಯವಾದುದು ಎಂದರು.

ವಿಮಾನ ನಿಲ್ದಾಣದ ವ್ಯವಸ್ಥಿತ ನಿರ್ವಹಣೆ, ಸಂಚಾರ ಸಂಪರ್ಕ ಮತ್ತು ಉಸ್ತುವಾರಿ ಕಾರ್ಯಗಳ ಕುರಿತು ಗಮನಹರಿಸಬೇಕಾದ ಅಗತ್ಯವಿದೆ. ನಿಲ್ದಾಣದ ನಿರ್ವಹಣೆ ಕುರಿತು ಉನ್ನತ ಮಟ್ಟದ ಅಧಿಕಾರಿಗಳು ಸಭೆ ಸೇರಿ ನಿರ್ಣಯ ಕೈಗೊಂಡು ಮುಂದಿನ ಕ್ರಮಗಳಿಗೆ ಅನುವು ಮಾಡಿಕೊಡುವಂತೆ ಗೌರವಗುಪ್ತಾ ಅವರಿಗೆ ಮನವಿ ಮಾಡಿದ ಅವರು, ನಿಲ್ದಾಣದ ಉದ್ಘಾಟನೆಗೆ ಜನವರಿ ಮಾಸಾಂತ್ಯದೊಳಗಾಗಿ ಪ್ರಧಾನಮಂತ್ರಿ ಅವರ ಸಮಯವನ್ನು ನಿಗದಿಗೊಳಿಸಿ ಕೊಡುವಂತೆ ರಾಜ್ಯ ಸರ್ಕಾರದ ವತಿಯಿಂದ ಕೋರಲಾಗುವುದು ಎಂದರು.

ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಪೂರ್ವಿಮಠ್, ರಾಜೀವ್ಕುಮಾರ್ ರೈ, ಹೆಪ್ಸಿಬಾರಾಣಿ ಕೊರ್ಲಪಾಟಿ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹೆಚ್.ಆರ್.ರಾಜಪ್ಪ, ರೈಟ್ಸ್ ಸಂಸ್ಥೆಯ ಇಂಜಿನಿಯರ್ ರವಿ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಕಾಂತರಾಜ್, ಸಂಪತ್ ಕುಮಾರ್ ಮುಂತಾದ ಅಧಿಕಾರಿಗಳು ಹಾಗೂ ವಿಮಾನಯಾನ ಸಂಸ್ಥೆಯ ತಂತ್ರಜ್ಞರು, ಗುತ್ತಿಗೆದಾರರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

26/09/2022 07:51 am

Cinque Terre

22.76 K

Cinque Terre

0

ಸಂಬಂಧಿತ ಸುದ್ದಿ